ಗುಲ್ಬರ್ಗಾ

ಪೂರ್ವಭಾವಿ ಸಭೆ

Published On :

ಗುಲ್ಬರ್ಗ: ಸಮಾಜದ ಸುಧಾರಣೆಗಾಗಿ ಬಸವಾದಿ ಶರಣರ ವಿಚಾರಗಳನ್ನು ಸಾಮಾನ್ಯರಿಗೆ ತಲುಪಿಸುವುದರ ಜತೆಗೆ ಹೊಸತನ ಮೂಡಿಸುವ ಉದ್ದೇಶದಿಂದ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯು ಫೆಬ್ರವರಿ ಮೊದಲ ವಾರ ರಾಜ್ಯಮಟ್ಟದ ವಚನಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಜ.14 ರಂದು ಬೆಳಗ್ಗೆ 10.30ಕ್ಕೆ ಪತ್ರಿಕಾಭವನದಲ್ಲಿ ಹಮ್ಮಿಕೊಂಡಿದೆ. ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಸಂಸ್ಥಾಪಕ ವಿಜಯಕುಮಾರ ತೇಗಲಸಿಪ್ಪಿ ಅಧ್ಯಕ್ಷತೆ ವಹಿಸುವರು.
16ಕ್ಕೆ ಪುಣ್ಯಸ್ಮರಣೆ
ಗುಲ್ಬರ್ಗ: ಸ್ವಾಮಿ ಸಮರ್ಥ ಮಂದಿರದಲ್ಲಿ ಜ.16 ರಂದು ಲಿಂಗೈಕ್ಯ ಶಂಕರ ಸ್ವಾಮಿ ಮಹಾರಾಜರ 10ನೇ ವರ್ಷದ ಪುಣ್ಯಸ್ಮರಣೆ ಆಚರಿಸಲು ನಿರ್ಧರಿಸಲಾಗಿದೆ. ಅಂದು ಬೆಳಗ್ಗೆ 7.30ರಿಂದ 11.30ರವರೆಗೆ ಮುಂಬೈನಿಂದ ಆಗಮಿಸುವ ಭಕ್ತಾದಿಗಳಿಂದ ಮಹಾಭೀಷೇಕ ಹಾಗೂ ಮಹಾಆರತಿ, ಮಧ್ಯಾಹ್ನ 12 ರಿಂದ ಸ್ವಾಮಿ ಸಮರ್ಥರ ಪಲ್ಲಕ್ಕಿ ಉತ್ಸವ, 1 ಗಂಟೆಯಿಂದ ಮಹಾಪ್ರಸಾದ ನಂತರ ಭಕ್ತಿ ಸಂಗೀತ, ಭಜನಾ ಕಾರ್ಯಕ್ರಮ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.