ಗುಲ್ಬರ್ಗಾ

ವಿದ್ಯಾರ್ಥಿ ನಿಲಯ ಸುಧಾರಣೆಗೆ ಇಲಾಖೆಯಿಂದ ಕ್ರಮ: ಆಂಜನೇಯ

Published On :

ಯಾದಗಿರಿ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಸುಧಾರಣೆಗೆ ಇಲಾಖಾ ವತಿಯಿಂದ ಈಗಾಗಲೇ ಸಾಕಷ್ಟು ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ತಿಳಿಸಿದರು.
ಜಿಲ್ಲೆಯ ಸುರಪುರ ತಾಲೂಕಿನ ತಿಂಥಿಣಿಯಲ್ಲಿ ರಾಯಚೂರಿನ ಕೃಷಿ ವಿಶ್ವವಿದ್ಯಾಲಯ, ಹಟ್ಟಿ ಚಿನ್ನದ ಗಣಿ ಕಂಪನಿ ಹಾಗೂ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನೂತನವಾಗಿ ಆರಂಭಿಸಲಾದ ಜೈವಿಕ ಇಂಧನ ಉದ್ಯಾನವನ್ನು ಉದ್ಘಾಟಿಸಿ ಮಾತನಾಡಿದರು.
ಯಾದಗಿರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಯಾವ ಸ್ಥಳಗಳಲ್ಲಿ ವಿದ್ಯಾರ್ಥಿ ನಿಲಯಗಳು ಬಾಡಿಗೆಯ ಮೇಲೆ ನಡೆಯುತ್ತಿವೆಯೋ ಆ ಸ್ಥಳಗಳಲ್ಲಿಯೇ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸೂಚನೆ ನೀಡಿ, ಇದಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾದ ಅಡಿಗೆಯವರು ಅವರ ಸಹಾಯಕರು ಹಾಗೂ ಇತರೆ ಹುದ್ದೆಗಳನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳಲು ಕ್ರಮ ಜರುಗಿಸಲಾಗುತ್ತಿದೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕ ಗೊಂಡವರಿಂದ ಹೆಚ್ಚಿನ ಗುಣಮಟ್ಟದ ಕೆಲಸ ಆಗುತ್ತಿಲ್ಲ, ಶೀಘ್ರವೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಖಾಯಂ ಆಗಿ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.