ಗುಲ್ಬರ್ಗಾ

ಪೈಗಂಬರ್ ಸಂದೇಶ ಪಾಲಿಸಿ

Published On :

ಕ.ಪ್ರ. ವಾರ್ತೆ    ಚಿಂಚೋಳಿ    ಜ.14
ಪ್ರವಾದಿ ಮಹಮದ್ ಪೈಗಂಬರರ ಜನ್ಮ ದಿನವಾದ ಈದ್‌ಮಿಲಾದ್ ಅಂಗವಾಗಿ ಚಂದಾಪೂರ ನಗರದ ನಮಲ್ ಸೊಸೈಟಿ ವತಿಯಿಂದ ಏರ್ಪಡಿಸಿದ್ದ ಬಡ ರೋಗಿಗಳಿಗೆ ಹಣ್ಣು ಹಂಪಲು ಮತ್ತು ಬಟ್ಟೆ ವಿತರಣೆ ಕಾರ್ಯಕ್ರಮವನ್ನು ಶಾಸಕ ಡಾ. ಉಮೇಶ ಜಾಧವ್ ಉದ್ಘಾಟಿಸಿದರು.
ಪ್ರವಾದಿ ಮಹಮದ್ ಪೈಗಂಬರ್‌ರ ಶಾಂತಿ ಸಂದೇಶಗಳು ನಮ್ಮೆಲ್ಲರಿಗೆ ಅಗತ್ಯವಾಗಿವೆ. ಸಂಕ್ರಾಂತಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಒಂದೇ ದಿನ ಆಚರಿಸುತ್ತಿರುವುದು ಭಾವೈಕ್ಯತೆಯ ಸಂಕೇತವಾಗಿದೆ ಎಂದು ಡಾ. ಜಾಧವ್ ನುಡಿದರು. ಕಾರ್ಯಕ್ರಮದಲ್ಲಿ ದಲಿತ ಮುಖಂಡ ಗೋಪಾಲರಾವ ಕಟ್ಟಿಮನಿ, ಕೆ.ಎಮ್.ಬಾರಿ ಮಾತನಾಡಿದರು.
ಡಾ. ತಹನೀಯತ ಬೇಗಂ, ಪಪಂ ಅಧ್ಯಕ್ಷೆ ಇಂದುಮತಿ ಸ್ವಾಮಿ, ನಮಲ್ ಸೊಸೈಟಿ ಅಧ್ಯಕ್ಷ ಮಹ್ಮದ ಹಾಫೀಜ್, ಪಪಂ ಸದಸ್ಯರಾದ ಅಬ್ದುಲ್ ಬಾಸಿತ, ತಾಲೂಕ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಪಾಟೀಲ್,ಮುಂತಾದವರು ಭಾಗವಹಿಸಿದರು. ಮಹ್ಮದ ಹಾಫೀಜ್ ಸ್ವಾಗತಿಸಿದರು. ಮಹ್ಮದ ಹನ್ನುಮಿಯ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.