ಗುಲ್ಬರ್ಗಾ

ಮೆರವಣಿಗೆ

Published On :

ಶಹಾಬಾದ್: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶರಿಯತ್ ಸಮಿತಿ ವತಿಯಿಂದ ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಜಾಮಿಯಾ ಮಸೀದಿ ವೃತ್ತದಲ್ಲಿ  ಈದ್ ಮಿಲಾದ್ ಪ್ರಯುಕ್ತ ಶಾಸಕ ಜಿ.ರಾಮಕೃಷ್ಣ, ನಗರಸಭೆ ಅಧ್ಯಕ್ಷ ಗಿರೀಶ ಕಂಬಾನೂರ, ಶರಿಯತ್ ಸಮಿತಿ ಅಧ್ಯಕ್ಷ ಅನ್ವರ ಚಪಾಟ್ಲೆ, ಕಾರ್ಯದರ್ಶಿ ಮಹಬೂಬ, ನಗರಸಭೆ ಸದಸ್ಯರಾದ ಡಾ.ಅಹಮ್ಮದ ಪಟೇಲ್, ಕುಮಾರ ಚವ್ಹಾಣ, ರಾಮಕುಮಾರ ಸಿಂಘೆ ಸೇರಿದಂತೆ ವಿವಿಧ ಗಣ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ಏರ್ಪಡಿಸಿದ್ದರು. ಶಾಸಕ ಜಿ. ರಾಮಕೃಷ್ಣ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ಗಿರೀಶ ಕಂಬಾನೂರ, ಸಂತೋಷಕುಮಾರ ಇಂಗಿನಶೆಟ್ಟಿ, ಡಾ.ಅಹಮ್ಮದ ಪಟೇಲ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.