'ಹಳ್ಳಿ ಶಾಲೆಗಳಲ್ಲಿ ಹಾಜರಾತಿ ಕಡಿಮೆ'
ಶಹಾಪುರ: ತಾಲೂಕಾದ್ಯಂತ ಗಣನೀಯ ಹಳ್ಳಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಪೂರ್ಣ ಇಳಿಮುಖವಾಗಿದ್ದು, ದಿನನಿತ್ಯ 16 ವರ್ಷದೊಳಗಿನ ಮಕ್ಕಳು ಕೆಲಸದಲ್ಲಿ ಹೆಚ್ಚು ನಿರತರಾಗಿರುವುದು ಕಂಡುಬರುತ್ತಿದೆ. ಶಿಕ್ಷಣ ಇಲಾಖೆ ಸಂಬಂಧಿಸಿದ ಸಿಆರ್ಪಿ, ಬಿಆರ್ಪಿಗಳು ಕಂಡು ಕಾಣದಂತಿರುವುದು ಶೈಕ್ಷಣಿಕ ವ್ಯವಸ್ಥೆಗೆ ತೊಂದರೆಯಾಗಿ ಸರ್ಕಾರದ ಯೋಜನೆಗಳು ವಿಫಲವಾಗುತ್ತಿವೆಯೆಂದು ಕರವೇ ತಾಲೂಕಾ ಘಟಕದ ಕಾರ್ಯದರ್ಶಿ ಶರಣು ಬೀರ್ನೂರ ಈ ಕುರಿತು ಮೇಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ.
ಕೂಲಿಕಾರ್ಮಿಕರ ಕೊರತೆ ನೆಪದಲ್ಲಿ ಬಾಲಕಾರ್ಮಿಕರು ಹೆಚ್ಚು ಬಳಕೆಯಾಗುತ್ತಿದ್ದು, ದಿನನಿತ್ಯ ರಸ್ತೆಯ ಮೇಲೆ ದುಡಿಯಲು ಶಕ್ತರಿಲ್ಲದ ಮಕ್ಕಳನ್ನು ಟಂಟಂ ಮತ್ತು ಜೀಪ್ಗಳಲ್ಲಿ ಕರೆದುಕೊಂಡು ಹೋಗುತ್ತಿರುವುದು ಕಣ್ಮುಂದೆಯಿದ್ದರೂ ಬಾಲಕಾರ್ಮಿಕ ಇಲಾಖೆಯಾಗಲಿ, ಶಿಕ್ಷಣ ಇಲಾಖೆಯಾಗಲಿ ಸ್ಪಂದಿಸುತ್ತಿಲ್ಲ. ಸರ್ಕಾರ ವಿದ್ಯಾವಂಚಿತರನ್ನು ಗುರುತಿಸುವ ಕಾರ್ಯ ಇತ್ತೀಚಿಗೆ ಸಮೀಕ್ಷೆ ಮೂಲಕ ನಡೆಸಿದ್ದು ಒಂದೆಡೆಯಾದರೆ ಹಳ್ಳಿಗಳಲ್ಲಿನ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದು ತಾಲೂಕಿನ ಶಿಕ್ಷಣ ವ್ಯವಸ್ಥೆಯ ಹಿನ್ನಡೆಗೆ ಕಾರಣವಾಗುತ್ತಿದೆ. ತಕ್ಷಣವೇ ಈ ಕುರಿತು ಜಾಗೃತಿ ವಹಿಸಬೇಕೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

