ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ
ಚಿತ್ತಾಪುರ: ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ಲಾಡ್ಜಿಂಗ್ ಕ್ರಾಸ್ ಬಳಿ ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸರ್ಕಾರ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ಬಂಡೆ ಅವರು ಇನ್ನೂ ಬದುಕುಳಿಯುತ್ತಿದ್ದರು. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವರು, ಐಜಿಪಿ, ಡಿಜಿಪಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಾವಿಗೆ ಕಾರಣರಾದ ಮುನ್ನಾನ ಸಹಚರರನ್ನು ಬಂಧಿಸಿ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರವೇ(ಪ್ರವೀಣ ಶೆಟ್ಟಿ)ತಾಲೂಕು ಅಧ್ಯಕ್ಷ ನರಹರಿ ಕುಲಕರ್ಣಿ, ಜೈಕರವೇ ಅಧ್ಯಕ್ಷ ಜಗದೇವ ಕುಂಬಾರ, ಕರವೇ (ಶಿವರಾಮೆಗೌಡ) ತಾಲೂಕು ಅಧ್ಯಕ್ಷ ಚಂದ್ರಕಾಂತ ನಾಟಿಕಾರ, ವೀರಕನ್ನಡಿಗರ ಸೇನೆ ತಾಲೂಕು ಅಧ್ಯಕ್ಷ ಲಕ್ಷ್ಮಣ ತಾಂಡೂರ ನೇತೃತ್ವದಲ್ಲಿ ಮುಖಂಡರಾದ ಅಂಬರೀಶ ಚಪಾಟ್ಲೆ, ಭೀಮರಾಯ, ಶಿವುಕುಮಾರ ಕುಂಬಾರ, ವಿನಾಯಕ, ಚೆನ್ನಪ್ಪ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಂತರ ಪಿಎಸ್ಐ ಬಂಡೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

