ಹದಗೆಟ್ಟ ಸಗರ ರಸ್ತೆ ದುರಸ್ತಿಗೆ ಆಗ್ರಹ
ಶಹಾಪುರ: ತಾಲೂಕಿನ ರಸ್ತಾಪುರದಿಂದ ಸಗರ ಗ್ರಾಮ ಸೇರುವ ಮುಖ್ಯರಸ್ತೆ ದುರಸ್ತಿಗೆ ಆಗ್ರಹಿಸಿ ಸಗರ ಗ್ರಾಮದ ಬಿಜೆಪಿ ಕಾರ್ಯಕರ್ತರು ಯುವ ಮುಖಂಡ ಮಹೇಶಗೌಡ ಸುಬೇದಾರ ನೇತೃತ್ವದಲ್ಲಿ ಯಾದಗಿರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ತಾಲೂಕಿನಲ್ಲಿಯೇ ದೊಡ್ಡ ಗ್ರಾಮವಾದ ಸಗರ ಗ್ರಾಮದಿಂದ ನಿತ್ಯ ಪಟ್ಟಣಕ್ಕೆ ನೂರಾರು ಜನರು ಸಂಚರಿಸುತ್ತಾರೆ. ನೌಕರರು, ವಿದ್ಯಾರ್ಥಿಗಳು ಸೇರಿದಂತೆ ರೈತರು ಪ್ರತಿಯೊಂದು ಕೆಲಸಕ್ಕೆ ನಿತ್ಯ ಪಟ್ಟಣ ಅರಸಿ ಬರುವುದು ಸಾಮಾನ್ಯವಾಗಿದೆ. ಆದರೆ ಈ ಹಾಳಾದ ರಸ್ತೆಯಿಂದ ಸಮಯ ಹಾಳಾಗುತ್ತಿದ್ದು ಅಲ್ಲದೆ ಸಂಚಾರದಲ್ಲಿ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಪ್ರಯಾಣಿಕರು ರೋಸಿ ಹೋಗಿದ್ದು, ಸರ್ಕಾರಕ್ಕೆ ಹಿಡಿ ಶಾಪ ಹಾಕುವಂತಾಗಿದೆ.
ರಸ್ತೆ ಮಾರ್ಗ ತಗ್ಗು ಗುಂಡಿಗಳು ಬಿದ್ದು ಅಪಾಯಕ್ಕೆ ಆಹ್ವಾನ ನೀಡಿದಂತಿವೆ. ವಾಹನ ಸವಾರರು ನಾನಾ ಬಾರಿ ಬಿದ್ದು ಅಪಾಯದಿಂದ ಪಾರಾಗಿದ್ದಾರೆ. ಮುಂದೆ ದೊಡ್ಡ ಅನಾಹುತ ಸಂಭವಿಸುವ ಮೊದಲೆ ಸಂಬಂಧಿಸಿದ ಅಧಿಕಾರಿಗಳು ರಸ್ತೆ ದುರಸ್ತಿಗೆ ಮುಂದಾಗಲಿ ಎಂದು ಅವರು ಎಚ್ಚರಿಸಿದ್ದಾರೆ.
ಮೂರ್ನಾಲ್ಕು ಬಾರಿ ರಸ್ತೆ ದುರಸ್ತಿ ಕಾರ್ಯ ನೆರವೇರಿಸಿದರು. ಪರಿಪೂರ್ಣವಾಗಿ ದುರಸ್ತಿ ಕಾರ್ಯ ನಡೆದಿರುವುದಿಲ್ಲ. ಗುತ್ತಿಗೆದಾರರ ಜೊತೆ ಅಧಿಕಾರಿಗಳು ಶಾಮೀಲಾಗಿ ಬೋಗಸ್ ಬಿಲ್ ಮಾತ್ರ ಸಾಕಷ್ಟು ಬಾರಿ ನುಂಗಿ ಹಾಕಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಕಾರಣ ಸಾರ್ವಜನಿಕ ಅನುಕೂಲಕ್ಕಾಗಿ ರಸ್ತೆ ದುರಸ್ತಿ ಕಾರ್ಯ ಜವಬ್ದಾರಿಯನ್ನು ಭೂಸೇನಾ ನಿಗಮದವರಿಗೆ ನೀಡಬೇಕೆಂದು ಗ್ರಾಮಸ್ಥರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

