4.12 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ
ಗುಲ್ಬರ್ಗ: ಈ ವರ್ಷದ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲಾದ್ಯಂತ ಜ.19ರಿಂದ 22ರವರೆಗೆ ನಾಲ್ಕು ದಿನಗಳ ಕಾಲ ಜರುಗಲಿದೆ. ಎಲ್ಲ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಐದು ವರ್ಷದೊಳಗಿನ ಒಟ್ಟು 4.12 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಗುಲ್ಬರ್ಗ ಜಿಪಂ ಸಿಇಒ ಟಿ.ಎಚ್.ಎಂ. ಕುಮಾರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 26.91 ಲಕ್ಷ ಜನಸಂಖ್ಯೆಯಿದ್ದು 5.16 ಲಕ್ಷ ಮನೆಗಳಿವೆ. ಮೊದಲನೇ (ಬೂತ್‌ದಿನ) ದಿನ 1436 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಉಳಿದ ಮೂರು ದಿನಗಳ ಕಾಲ 1436 ತಂಡಗಳು ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಿವೆ. ಒಟ್ಟು 130 ಟ್ರಾಂಜಿಟ್ ಲಸಿಕಾ ತಂಡಗಳು, 26 ಸಂಚಾರಿ ತಂಡಗಳು ಕಾರ್ಯನಿರ್ವಹಿಸಲಿವೆ. ಒಟ್ಟು 312 ಮೇಲ್ವಿಚಾರಕರು ಹಾಗೂ 3,186 ಸಿಬ್ಬಂದಿ ಪಲ್ಸ್‌ಪೋಲಿಯೋ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ರಾಜ್ಯದಲ್ಲಿ 2004ರಲ್ಲಿ ಒಂದು ಪೋಲಿಯೋ ಪ್ರಕರಣ ಹಾಗೂ 2007ರಲ್ಲಿ ಒಂದು ಪ್ರಕರಣ (ಹೊರರಾಜ್ಯ ಉತ್ತರ ಪ್ರದೇಶದಿಂದ ವಲಸೆ ಬಂದಿದ್ದು) ಹೊರತುಪಡಿಸಿ ಈವರೆಗೆ ಯಾವುದೇ ಹೊಸ ಪೋಲಿಯೋ ಪ್ರಕರಣಗಳು ಕಂಡುಬಂದಿರುವುದಿಲ್ಲ. ಅಲ್ಲದೆ ಗುಲ್ಬರ್ಗ ಜಿಲ್ಲೆಯಲ್ಲಿ 2004 ರಿಂದ ಯಾವುದೇ ಹೊಸ ಪ್ರಕರಣಗಳು ಕಂಡುಬಂದಿಲ್ಲ. ಪಲ್ಸ್ ಪೋಲಿಯೋ ಕಾರ್ಯಕ್ರಮವು 1995ರ ಡಿಸೆಂಬರ್‌ನಲ್ಲಿ ಪ್ರಾರಂಭಗೊಂಡು ಫೆಬ್ರುವರಿ 2013ರ ವರೆಗೆ ಒಟ್ಟು 52 ಸುತ್ತು ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರ ವರೆಗೆ ಹಾಗೂ ಫೆ.23ರಿಂದ 26ರವರೆಗೆ ಜರುಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

