ಕನ್ಯಾಕೋಳೂರಕ್ಕೆ ಐಜಿಪಿ ಭೇಟಿ; ಪರಿಶೀಲನೆ
ಗುಲ್ಬರ್ಗ ಶಹಾಪುರ: ತಾಲೂಕಿನ ಕನ್ಯಾಕೋಳೂರ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಶಹಾಪುರಕ್ಕೆ ಭೇಟಿ ನೀಡಿದ ಐಜಿಪಿ ವಜೀರ ಅಹ್ಮದ್ ಹೇಳಿದ್ದಾರೆ.
ಸದ್ಯ ಅಲ್ಲಿ 7 ಕೆಎಸ್ಆರ್ಪಿ ತುಕಡಿ, 20 ಸಿಪಿಐ, 20 ಪಿಎಸ್ಐ ಮತ್ತು 400 ಜನ ಪೋಲಿಸರ ತಂಡವನ್ನು ನಿಯೋಜಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು. ಶಹಾಪುರ ತಾಲೂಕಿನಲ್ಲಿ ಶಾಂತಿ ಕದಡದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಫ್. ಆರ್. ಜಮಾದಾರ ಮಾಹಿತಿ ನೀಡಿ ಸದ್ಯ 3.75 ಲಕ್ಷ ತುರ್ತು ಪರಿಹಾರ ವ್ಯವಸ್ಥೆ ಮಾಡಿದ್ದು ಇನ್ನೂ 1.25 ಲಕ್ಷ ನಂತರ ಪರಿಹಾರ ರೂಪದಲ್ಲಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಗುಲ್ಬರ್ಗದಲ್ಲಿ ಚಿಕಿತ್ಸೆ: ಗಾಯಗೊಂಡ ಶಹಾಪುರ ಪೊಲೀಸ್ ಅಧಿಕಾರಿಗಳಿಬ್ಬರನ್ನು ಚಿಕಿತ್ಸೆಗೆಂದು ಗುಲ್ಬರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಆಸ್ಪತ್ರೆ ಮೂಲಗಳು ಕನ್ನಡಪ್ರಭಕ್ಕೆ ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

