ಗುಲ್ಬರ್ಗಾ

ಚಿಂಚೋಳಿಯಲ್ಲಿ ಪಲ್ಸ್ ಪೋಲಿಯೋ

Published On :

ಚಿಂಚೋಳಿ: ಜ. 19ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ 5 ವರ್ಷದೊಳಗಿನ ಒಟ್ಟು 35246 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಕುಲಕರ್ಮಿ ತಿಳಿಸಿದ್ದಾರೆ. ತಾಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ 162 ಬೂತ್ ತೆರೆಯಲಾಗಿದೆ. ಜನನಿಬಿಡ ಪ್ರದೇಶದಲ್ಲಿ 163 ಸಂಚಾರಿ ಬೂತ್ ಪ್ರಾರಂಭಿಸಲಾಗಿದೆ. ರಾಷ್ಟ್ರಿಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ತಾಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶದ ಒಟ್ಟು 50887 ಮನೆಗಳಿಗೆ ಭೇಟಿ ನೀಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರು, 213 ಆಶಾ ಕಾರ್ಯಕರ್ತೆಯರು ಮತ್ತು  ಇಲಾಖೆಯ ಆರೋಗ್ಯ ಸಹಾಯಕಿ ಸಹಾಯಕ ಒಟ್ಟು 50, 36 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಕುಲಕರ್ಣಿ ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.