ನಾಯಕರ ಏಕಪಕ್ಷೀಯ ನಿರ್ಧಾರದಿಂದ ನನಗೆ ಅನ್ಯಾಯ: ರೆಡ್ಡಿ
ಗುರುಮಠಕಲ್: ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನನ್ನನ್ನು ತೆಗೆದುಹಾಕಿದ್ದು, ಪಕ್ಷದ ನಾಯಕರ ಏಕಪಕ್ಷೀಯ ನಿರ್ಧಾರವಾಗಿದೆ ಎಂದು ಕೆಡಿಪಿ ಸದಸ್ಯ ವೆಂಕಟರೆಡ್ಡಿ ಅಬ್ಬೆತುಮಕೂರ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕುವ ಮುಂಚೆ ನನ್ನ ಜೊತೆ ಚರ್ಚಿಬೇಕಿತ್ತು. ನೋಟೀಸ್ ನೀಡಬೇಕಿತ್ತು ಇದ್ಯಾವುದು ಮಾಡದೇ ಏಕಾಏಕಿಯಾಗಿ ಜಿಲ್ಲಾಧ್ಯಕ್ಷ ವೀರಣ್ಣಗೌಡ ಮಲ್ಲಾಬಾದಿ, ಸಂಘಟನಾ ಕಾರ್ಯದರ್ಶಿ ನೀಲಕಂಠರಾಯ ಎಲ್ಹೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮಾಗನೂರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ವೀರಣ್ಣಗೌಡ ಮಲ್ಲಾಬಾದಿ ಅವರು ಜೇವರ್ಗಿ ಮತಕ್ಷೇತ್ರದವರಾಗಿದ್ದಾರೆ. ಸ್ಥಳೀಯರಾದ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವಂತೆ ಹೇಳಿಕೆ ನೀಡಿರುವದನ್ನು ಮುಂದಿಟ್ಟುಕೊಂಡು ನನ್ನನ್ನು ಹುದ್ದೆಯಿಂದ ಕೆಳಗಿಳಿಸಿದ್ಧಾರೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದರು. ವೆಂಕಟರೆಡ್ಡಿ ಮುದ್ನಾಳ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದರೆ ಜಿಲ್ಲೆಯಲ್ಲಿ ಬಿಜೆಪಿ ಬಲಗೊಳ್ಳಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲವಿಗೆ ಸಹಾಯಕಾರಿಯಾಗಲಿದೆ. ಅವರಲ್ಲಿ ಸಂಘಟನೆ ಶಕ್ತಿ ಇದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಶರಣು ಆಶನಾಳ, ಭೀಮರಾಯ ಜಂಗಳಿ, ವೆಂಕಟೇಶ ಹುಲಕಲ್, ಚಂದ್ರುಗೌಡ ಸೇರಿದಂತೆ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

