ಪೋಲಿಯೊ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಕರೆ
ಸುರಪುರ: ಒಂದು ಹನಿ ಪೋಲಿಯೋ ಮಗುವಿನ ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕಾರಣ ಸಾರ್ವಜನಿಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು. ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರು ಕೈಜೋಡಿಸಬೇಕೆಂದು ಶಾಸಕ ರಾಜಾ ವೆಂಕಟಪ್ಪನಾಯಕ ಕರೆ ನೀಡಿದರು.
ಇಲ್ಲಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅರಿವು ಮೂಡಿಸಿ: ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸರ್ಕಾರ ಸಾಕಷ್ಟು ಕ್ರಮಗಳನ್ನು ರೂಪಿಸಿದೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಪೋಲಿಯೋ ಲಸಿಕೆ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಪಾಲಕರು ಕೂಡಾ ಸಂಪೂರ್ಣವಾಗಿ ಸಹಕರಿಸಬೇಕೆಂದು ಮನವಿ ಮಾಡಿದರು.
ಲಸಿಕೆ ಬಗ್ಗೆ ಮಾಹಿತಿ: ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಮಾತನಾಡಿ, ತಾಲೂಕಿನಲ್ಲಿ ಒಟ್ಟು 68,415 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ತಾಲೂಕಾದ್ಯಂತ 236 ಬೂತ್ಗಳನ್ನು ಸ್ಥಾಪಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗಾಗಿ ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 450 ಸಿಬ್ಬಂದಿ ನೇಮಿಸಲಾಗಿದೆ. ಬೂತ್ ಮಟ್ಟದಲ್ಲಿ ಮುಂದಿನ 3ದಿನ ಮನೆ ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು ಎಂದು ಮಾಹಿತಿ ನೀಡಿದರು. ಈ ಬಾರಿ ಶೇ.100 ರಷ್ಟು ಗುರಿ ಸಾಧಿಸಲು ಪ್ರಯತ್ನಿಸಲಾಗುವುದು. ಫೆ.23 ಎರಡನೇ ಸುತ್ತಿನ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಆಸ್ಪತ್ರೆ ವೈಧ್ಯಾಧಿಕಾರಿ ಡಾ. ನಾಗನಾಥ ಹೆಬ್ಳೆ, ಡಾ. ಹರ್ಷವರ್ಧನ ರಫಗಾರ್, ಡಾ. ವಿ.ಎಲ್. ಚೌದ್ರಿ, ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ, ಬಿಇಒ ಎ.ವಿ. ಕೆಂಪರಂಗಯ್ಯ, ಸಿಡಿಪಿಒ ಧೇನುಸಿಂಗ ಚವ್ಹಾಣ, ಚಂದ್ರಲೀಲಾ ನಿಂಬೂರ್, ಡಯಟ್ ನೋಡಲ್ ಅಧಿಕಾರಿ ಪಂಡಿತ ನಿಂಬೂರ, ಸನೌಸಂ ಅಧ್ಯಕ್ಷ ಭೀಮಣ್ಣ ಭೋಸ್ಗಿ, ಮುಖಂಡರಾದ ಸೂಲಪ್ಪ ಕಮತಗಿ, ರಾಮಣಗೌಡ ಬೊಮ್ಮನಳ್ಳಿ, ಸಿಬ್ಬಂದಿ ಸುಕುಮಾರಿ, ಬಸವರಾಜ, ಮಹೇಶ, ಉಷಾರಾಣಿ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

