ಕಬ್ಬಲಿಗ ಸಮಾಜ ಎಸ್ಟಿಗೆ ಸೇರಿಸಲು ಅವಿರತ ಪ್ರಯತ್ನ
ಶಹಾಪುರ: ಕಬ್ಬಲಿಗ ಸಮಾಜ ಪ್ರೀತಿ ವಿಶ್ವಾಸದಿಂದ ಸಮಾಜ ಸಂಘಟನೆಯಲ್ಲಿ ತೊಡಗಿದೆ. ಸಮಾಜದಲ್ಲಿ ಇನ್ನೂ ಜಾಗೃತಿಯಾಗಬೇಕು. ಸರ್ಕಾರದ ಜನಪರ ಯೋಜನೆಗಳ ಉಪಯೋಗ ಪಡೆಯಬೇಕು ಎಂದು ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ತಿಳಿಸಿದರು.
ದೋರನಹಳ್ಳಿ ಅಂಬಿಗರ ಚೌಡಯ್ಯ ಮಠದಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುವದಲ್ಲಿ ಮಾತನಾಡಿದ ಅವರು, ಸಾಮಾಜಿಕ ಸುಧಾರಣೆಯ ವಚನಗಳ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಿದ ಅಂಬಿಗರ ಚೌಡಯ್ಯನವರ ತತ್ತ್ವಾದರ್ಶಗಳನ್ನು ಪಾಲಿಸುವತ್ತ ಮುನ್ನಡೆಯಬೇಕು ಎಂದು ತಿಳಿಸಿದರು. ಕಬ್ಬಲಿಗ ಸಮಾಜದ ವಿಕಾಸ ಕಾರ್ಯದಲ್ಲಿ ಹೆಚ್ಚಿನ ಶ್ರಮ ವಹಿಸಿ ಸಮಾಜವನ್ನು ಎಸ್ಟಿಗೆ ಸೇರಿಸಲು ಸಂಕಲ್ಪಿಸಿರುವುದಾಗಿ ಅವರು ಹೇಳಿದರು. ಪ್ರಗತಿಪರ ವಿಚಾರಧಾರೆಯಲ್ಲಿ ಮುನ್ನೆಡೆದ ಅಂಬಿಗರ ಚೌಡಯ್ಯನವರ ವಚನಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ಅಂಬಿಗರ ಚೌಡಯ್ಯ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕ ಡಾ.ಎ. ಬಿ. ಮಾಲಕರಡ್ಡಿ ಹೇಳಿದರು. ಮಾತಾ ಮಾಣಿಕೇಶ್ವರಿ, ಮಹರ್ಷಿ ವೇದವ್ಯಾಸ, ಅಂಬಿಗರ ಚೌಡಯ್ಯ ಮತ್ತು ಸಮಾಜಕ್ಕಾಗಿ ದುಡಿದ ದಿ. ವಿಠಲ ಹೇರೂರ ಅವರ ಭಾವಚಿತ್ರಗಳ ಮೆರವಣಿಗೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

