ಗುಲ್ಬರ್ಗಾ

ಚಿಂಚೋಳಿ; ರಸ್ತೆಗಳ ದುರಸ್ತಿಗಾಗಿ ಒತ್ತಾಯಿಸಿ ಪ್ರತಿಭಟನೆ

Published On :

ಚಿಂಚೋಳಿ: ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿಗಾಗಿ ಒತ್ತಾಯಿಸಿ ತಾಲೂಕ ನಾಗರೀಕ ಹೋರಾಟ ಸಮಿತಿ ಮುಖಂಡರು ಪಟ್ಟಣದಲ್ಲಿ ಬಸ್‌ನಿಲ್ದಾಣದ ಹತ್ತಿರ  ಟೈರುಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ  ತಹಸೀಲ್ದಾರರರಿಗೆ ಮನವಿ ಸಲ್ಲಿಸಿದರು. ಸಮಿತಿ ಅಧ್ಯಕ್ಷ ಗೋಪಾಲರಾವ ಕಟ್ಟಿಮನಿ ಮಾತನಾಡಿ, ತಾಲೂಕಿನ ಪ್ರಮುಖ ರಸ್ತೆಗಳಾಗಿರುವ ಚಿಂಚೋಳಿ- ಮನ್ನಾಎಕ್ಕೆಳ್ಳಿ, ಗುಲ್ಬರ್ಗ-ಮಹಾಗಾಂವ- ಸುಲೇಪೇಟ-ಚಿಂಚೋಳಿ, ಹಾಗೂ ಕುಂಚಾವರಂ- ಇನ್ನಿತರ ಗ್ರಾಮೀಣ ಪ್ರದೇಶ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಸರಕಾರದಿಂದ ಕೋಟ್ಯಾಂತರ ರೂ. ಖರ್ಚು ಮಾಡಿ ರಸ್ತೆ ನಿರ್ಮಿಸಲಾಗಿದೆ. ಆದರೆ ಕಳಪೆಮಟ್ಟದ  ಕಾಮಗಾರಿಗಳಿಂದಾಗಿ ರಸ್ತೆಗಳು ಹದಗೆಟ್ಟಿವೆ. ಕಳೆದ 5-6 ವರ್ಷಗಳಿಂದ ರಸ್ತೆಗಳಲ್ಲಿ ಅತಿಯಾದ ಧೂಳು ಹರಡುತ್ತಿರುವುದರಿಂದ ಪ್ರಯಾಣಿಕರು ಅನೇಕ ರೋಗಗಳಿಂದ ಬಳಲುವಂತಾಗಿದೆ. ಚೆಟ್ಟಿನಾಡ್, ವಿಕಾಟ ಸಾಗರ ಸಿಮೆಂಟ್ ಕಂಪನಿಗಳಿಂದ 50-60 ಟನ್ ಸಿಮೆಂಟ್ ತುಂಬಿದ ಲಾರಿಗಳು ಓಡಾಟುದಿಂದ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟಿವೆ. ಲೋಕೋಪಯೋಗಿ ಇಲಾಖೆ ಉಪ-ವಿಭಾಗದ ಎಇಇ ಅವರ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರೊಂದಿಗೆ ಶಾಮೀಲಾಗಿ ರಸ್ತೆಗಳು ಕಳೆಪೆಮಟ್ಟದಿಂದ ಕೂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಾರ್ಯದರ್ಶಿ ಭೀಮಶೆಟ್ಟಿ ಎಂಪಳ್ಳಿ ಮಾತನಾಡಿ, ತಾಲೂಕಿನಲ್ಲಿ ಅನೇಕ ರಸ್ತೆಗಳು ಹದಗೆಟ್ಟಿದ್ದರೂ ಸಹಾ ಸ್ಥಳೀಯ ಶಾಸಕರು ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.