ಗುಲ್ಬರ್ಗಾ

ಜೀತ ಪದ್ಧತಿ ನಿರ್ಮೂಲನೆಗೆ ಕ್ರಮ

Published On :

ಜೇವರ್ಗಿ: ರಾಜ್ಯದಲ್ಲಿ ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಆ ನಿಟ್ಟಿನಲ್ಲಿ ಅಧಿಕಾರಿ ವರ್ಗದವರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅವಶ್ಯವೆಂದು ಕರ್ನಾಟಕ ಜೀತದಾಳು ಮತ್ತು ಕೃಷಿ ಕೂಲಿಕಾರರ ಒಕ್ಕೂಟ(ಜೀವಿಕ)ದ ರಾಜ್ಯ ಸಂಚಾಲಕ ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ತಾಲೂಕಾಡಳಿತ ಮತ್ತು ಜೀವಿಕ ಸಂಘಟನೆ ವತಿಯಿಂದ ಆಯೋಜಿಸಿದ್ದ ಜೀತದಾಳುಗಳ ಮರು ಸಮೀಕ್ಷೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.
ಇದು ಬಲಾತ್ಕಾರದ ದುಡಿಮೆ ಪದ್ಧತಿ: ಜೀತ ಪದ್ಧತಿ ಬಲಾತ್ಕಾರದ ಅಥವಾ ಭಾಗಶಃ ಬಲಾತ್ಕಾರದ ದುಡಿಮೆ ಪದ್ಧತಿಯಾಗಿದೆ. ಸಾಲದ ಬದಲಾಗಿ ಸಾಲಿಗಗೋಸ್ಕರ ದುಡಿಮೆ ಸಲ್ಲಿಸುವುದು. ಸಾಲ ತೀರುವ ತನಕ ಬೇರೆಡೆ ಕೆಲಸಕ್ಕೆ ಹೋಗುವ ಸ್ವಾತಂತ್ರ್ಯ ಕಳೆದುಕೊಳ್ಳುವುದು. ತನ್ನ ದುಡಿಮೆಯ ಯಾವುದೇ ಉತ್ಪಾದನೆಯನ್ನು ಸಾಲಿಗನಿಗೆ ಒಪ್ಪಿಸಬೇಕಾದ ನಿರ್ಬಂಧ ಹೇರಲಾಗುತ್ತದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಘೋಷಣೆಯಡಿಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಜೀತಮುಕ್ತ ರಾಜ್ಯವನ್ನಾಗಿ ಮಾಡಲು ಅನೇಕ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ನಾರಾಯಣಸ್ವಾಮಿ ತಿಳಿಸಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ರೆಡ್ಡಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲಾನರಸಿಂಹ ರೆಡ್ಡಿ, ಎಎಸ್‌ಐ ರಾಣಪ್ಪ, ಜೀತದಾಳು ಮತ್ತು ಹಣಮಂತರಾಯಪ್ಪ, ಜಿಲ್ಲಾ ಸಂಚಾಲಕ ರಾಘವೇಂದ್ರ ಕೀರಸಾವಳಗಿ, ಸೇಡಂ ತಾಲೂಕು ಸಂಚಾಲಕ ವಿಷ್ಣು ಬಸವನಾಳ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಆನಂದ, ಕಂದಾಯ ನಿರೀಕ್ಷಕ ಪ್ರಕಾಶ ಜೋಶಿ, ಕಲ್ಲಪ್ಪಗೌಡ ಕುಕನೂರ, ರಾಜಶೇಖರ  ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.