ನಾಳೆ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಧರಣಿ
ರಾಯಚೂರು: ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ಸರ್ಕಾರ ನೀಡಿರುವ 371(ಜೆ)ನೇ ಕಲಂ ಅನ್ವಯ ಉದ್ಯೋಗ ನೇಮಕಾತಿಯ ವಿಶೇಷ ಸವಲತ್ತುಗಳ ಅಡಿ ಹೈ.ಕ. ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಸೇವೆ ಕಾಯಮಾತಿಗೆ ಆಗ್ರಹಿಸಿ ಜ. 25ರಂದು ಸಾಂಕೇತಿಕ ಧರಣಿ ಆಯೋಜಿಸಲಾಗಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೈ.ಕ. ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವಿಭಾಗೀಯ ಜಂಟಿ ಹೋರಾಟ ಕ್ರಿಯಾ ಸಮಿತಿ ಅಧ್ಯಕ್ಷ ವೆಂಕಟರಾಮರೆಡ್ಡಿ ಈ ವಿಷಯ ತಿಳಿಸಿದರು.
ಕಾಯಮಾತಿಗೆ ಒತ್ತಾಯ: ಹೈ.ಕ. ಪ್ರದೇಶದ ಆರು ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಒಟ್ಟು 3,500 ಜನ ಗುತ್ತಿಗೆ ಆಧಾರದಲ್ಲಿ ಕಳೆದ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೈ.ಕ.ಕ್ಕೆ ದೊರೆತಿರುವ 371(ಜೆ)ನೇ ಕಲಂ ಅಡಿ ಕೈಗೊಳ್ಳುವ ನೇಮಕಾತಿ ವೇಳೆ ಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿದರು.
ಗುತ್ತಿಗೆ ನೌಕರರು ಕಾಯಂ ನೌಕರರಂತೆಯೇ ಸಮರ್ಪಕ ಕಾರ್ಯನಿರ್ವಹಿಸುತ್ತಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ನೌಕರರ ಸೇವೆ ಲಭ್ಯವಿಲ್ಲದೇ ಕಾಯಂ ನೌಕರರೊಂದಿಗೆ ನಿರ್ವಹಣೆ ಅಸಾಧ್ಯ ಎಂಬಂಥ ಸ್ಥಿತಿಯಿದೆ. ಅಲ್ಪ ವೇತನದಲ್ಲಿ ಗುತ್ತಿಗೆ ನೌಕರರು ದುಡಿಯುತ್ತಿದ್ದು, ಗುತ್ತಿಗೆ ನೌಕರರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆರೋಪಿಸಿದರು.
ಗುತ್ತಿಗೆ ಪದ್ಧತಿ ರದ್ದುಗೊಳಿಸಿ: ಹೈ.ಕ. ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಆರೋಗ್ಯ ಇಲಾಖೆಯಲ್ಲಿ ವಿಲೀನಗೊಳಿಸಿ ಸೇವೆ ಕಾಯಂಗೊಳಿಸಬೇಕು. ನಿಯಮಾವಳಿಗಳನ್ನು ರಚಿಸಬೇಕು. ಆರೋಗ್ಯ ಸೇವೆಯು ಅಗತ್ಯ ಮತ್ತು ತುರ್ತು ಸೇವೆಯಾಗಿದ್ದು ಹೈ.ಕ. ಭಾಗದಲ್ಲಿ ಗುತ್ತಿಗೆ ಪದ್ಧತಿಯ ನೇಮಕಾತಿ ರದ್ದುಗೊಳಿಸಬೇಕೆಂದು ಆಗ್ರಹಿಸಿ ಜ.25ರಂದು ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲಿ ಗುತ್ತಿಗೆ ನೌಕರರು ಕೆಲಸ ಸ್ಥಗಿತಗೊಳಿಸಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಿದ್ದಾರೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

