ಗುಲ್ಬರ್ಗಾ

ನೀರು ಪೂರೈಕೆ ಬೇಡಿಕೆಗಾಗಿ ಖಾಲಿ ಕೊಡಗಳ ಪ್ರತಿಭಟನೆ

Published On :

ಗುಲ್ಬರ್ಗ: ಕುಸುನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದೇಶ್ವರ ಮತ್ತು ಶ್ರೀನಗರ ಕಾಲೋನಿಯಲ್ಲಿ ಕುಡಿಯುವ ನೀರು ಪೂರೈಕೆ ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ನಗರದ ಜಿಲ್ಲಾ ಪಂಚಾಯತಿ ಕಚೇರಿ ಎದುರು ಜೈ ಕನ್ನಡಿಗ ರಕ್ಷಣಾ ವೇದಿಕೆಯಿಂದ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ಮಾಡಲಾಯಿತು.
ಈ ಬಡಾವಣೆಗಳಲ್ಲಿ ಕುಡಿಯುವ ನೀರಿಗೆ ಭಾರಿ ತೊಂದರೆ ಇದ್ದು, ಬೇಸಿಗೆಯಲ್ಲಿ ಸಮಸ್ಯೆ ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ ಕೂಡಲೇ ನೀರು ಪೂರೈಸಬೇಕು. ಈಗಾಗಲೇ ಇಎಸ್‌ಐಸಿ ಆಸ್ಪತ್ರೆಗೆ ಭೀಮಾ ನದಿಯ ನೀರನ್ನು ಪೈಪ್‌ಲೈನ್ ಮೂಲಕ ಪೂರೈಸಲಾಗಿದೆ. ಅದೇ ನೀರನ್ನು ಇತರ ಕಾಲೋನಿಗಳಿಗೆ ನೀಡಿದ್ದಲ್ಲಿ ಜನರಿಗೆ ಅನುಕೂಲವಾಗಲಿದೆ ಎಂದು ವೇದಿಕೆ ಅಧ್ಯಕ್ಷ ಸಚಿನ್ ಫರಹತಾಬಾದ್ ತಿಳಿಸಿದ್ದಾರೆ.
ಜತೆಗೆ ಈ ಕಾಲೋನಿಗಳಲ್ಲಿ ಬೀದಿ ದೀಪ, ರಸ್ತೆ ಸುಧಾರಣೆ, ಒಳಚರಂಡಿ ಹೀಗೆ ಹಲವು ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದ್ದಾರೆ.
ಹಲವು ಬಾರಿ ಕುಸುನೂರು ಗ್ರಾಪಂನಿಂದ ಈ ಬಡಾವಣೆಗಳಲ್ಲಿ ಕೊಳವೆ ಬಾವಿಗಳನ್ನು ತೋಡಿಸಲಾಗಿದೆ. ಆದರೆ ಅಂತರ್ ಜಲದ ಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದಿರುವುದರಿಂದ ನೀರು ಸಿಕ್ಕಿಲ್ಲ. ಹೀಗಾಗಿ ಕುಡಿಯುವ ನೀರನ್ನು ಖರೀದಿ ಮಾಡಿ ಬಳಸಲಾಗುತ್ತಿದೆ. ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದರಿ ಬಡಾವಣೆಗಳಲ್ಲಿ ತಿಂಗಳೊಳಗೆ ನೀರು ಪೂರೈಸದಿದ್ದಲ್ಲಿ ಸೇಡಂ ರಸ್ತೆ ತಡೆದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಅಣವೀರ ಪಾಟೀಲ್, ಕಾಶಿನಾಥ ಮಾಳಗಿ, ಸಂದೇಶ ಪವಾರ್ ಇತರರು ಪ್ರತಿಭಟನೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.