ನಾಳೆ 65ನೇ ಗಣರಾಜ್ಯೋತ್ಸವ ಅದ್ಧೂರಿ ಆಚರಣೆ
ಯಾದಗಿರಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ, ಇಲಾಖೆ ಹಾಗೂ ಭಾವೈಕ್ಯತಾ ಸಮಿತಿ ಯಾದಗಿರಿ ಇವರ ವತಿಯಿಂದ ಇದೇ ಜ.26 ರಂದು ಬೆಳಿಗ್ಗೆ 9ಕ್ಕೆ ಗಣರಾಜ್ಯೋತ್ಸವವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಚಿವ ಬಾಬುರಾವ ಚಿಂಚನಸೂರ್ ರಾಷ್ಟ್ರಧ್ವಜಾರೋಹಣ, ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುವರು, ಶಾಸಕರಾದ ಡಾ. ಎ.ಬಿ. ಮಾಲಕರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಭೀಮಮ್ಮ ಕೃಷ್ಣ ಚಪೇಟ್ಲಾ, ಲೋಕಸಭಾ ಸದಸ್ಯ ಎಸ್. ಫಕೀರಪ್ಪ, ಡಾ. ಬಸವರಾಜ ಪಾಟೀಲ ಸೇಡಂ ಭಾಗವಹಿಸುವರು.
ಶಹಾಪುರ ಶಾಸಕರಾದ ಗುರುಪಾಟೀಲ್ ಶಿರವಾಳ, ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ, ವಿಧಾನ ಪರಿಷತ್ ಸದಸ್ಯರಾದ ಅಮರನಾಥ ಪಾಟೀಲ್, ಕೆ.ಬಿ. ಶಾಣಪ್ಪ, ಅಲ್ಲಮಪ್ರಭು ಪಾಟೀಲ, ನಗರಸಭೆ ಅಧ್ಯಕ್ಷ ಮಹ್ಮದ್ ಇಸಾಕ್, ತಾಪಂ ಅಧ್ಯಕ್ಷೆ ಶೋಭಾರಾಣಿ ದೇವಿಂದ್ರಪ್ಪ ಕೋಟಗೇರಾ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಕಾರಣ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದ್ದಾರೆ. ಸಂಜೆ 6 ರಿಂದ 8 ಗಂಟೆವರೆಗೆ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗುವವು.
ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ
ಯಾದಗಿರಿ: ಬರುವ ಜ.26 ರಂದು ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುಕೂಲವಾಗುವಂತೆ ಜಿಲ್ಲಾ ಕ್ರೀಡಾಂಗಣ ಸಜ್ಜುಗೊಳಿಸುವ ಜೊತೆಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗಣರಾಜ್ಯೋತ್ಸವ ಆಚರಿಸುವ ಕುರಿತಂತೆ ಇಂದು ಜಿಲ್ಲಾಕ್ರೀಡಾಂಗಣದಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಬೇಕು. ಇದಕ್ಕಾಗಿ ಕ್ರೀಡಾಂಗಣವನ್ನು ಸರ್ವರೀತಿಯಲ್ಲಿ ಸಜ್ಜುಗೊಳಿಸಿ, ಗಣ್ಯರಿಗೆ ಸೂಕ್ತ ಆಸನದ ವ್ಯವಸ್ಥೆ, ಶಿಸ್ತುಬದ್ಧವಾದ ಪಂಥಸಂಚಲನ ಮತ್ತು ಇತರೇ ವ್ಯವಸ್ಥೆ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.
ಮುಂಜಾಗೃತ ಕ್ರಮಕ್ಕೆ ಸೂಚನೆ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರದ ಪ್ರಮುಖ ಸ್ಥಳಗಳಿಂದ ಬಸ್ಗಳ ವ್ಯವಸ್ಥೆ, ವಿವಿಧ ಮಹನೀಯರಿಗೆ ಸನ್ಮಾನದ ವ್ಯವಸ್ಥೆ, ಆರೋಗ್ಯ ಇಲಾಖೆಯಿಂದ ಮತ್ತು ಅಗ್ನಿಶಾಮಕ ಇಲಾಖೆಯಿಂದ ಸೂಕ್ತ ಮುಂಜಾಗೃತ ಕ್ರಮ, ಸುಸಜ್ಜಿತ ವೇದಿಕೆ ರಚನೆ ಮತ್ತು ಅಲಂಕಾರದಲ್ಲಿ ಯಾವುದೇ ಲೋಪ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲ ಅಧಿಕಾರಿಗಳಿಗೆ ತಿಳಿಸಿದರು.
ಮಕ್ಕಳ ಪಾಲಕರು ಮತ್ತು ಸಾರ್ವಜನಿಕರು ಸಹ ತಮ್ಮ ಮಕ್ಕಳಿಗೆ ಪ್ರೋತ್ಸಾಹಕ್ಕಾಗಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಪಂ ಸಿಇಒ ಜಿಲಾನಿ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ, ಕ್ರೀಡಾಇಲಾಖೆ, ತೋಟಗಾರಿಕೆ ಇಲಾಖೆ, ಗೃಹಮಂಡಳಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ, ಪಂ.ರಾಜ್ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

