ಪ್ರಜಾಪ್ರಭುತ್ವ ಪದ್ಧತಿಯಲ್ಲಿ ಮತದಾನಕ್ಕೆ ಮಹತ್ವ
ಸೈದಾಪುರ:ಇಲ್ಲಿನ ಸೈದಾಪುರ ಉಪತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.
ಉಪತಹಸೀಲ್ದಾರರಾದ ಗೋಪಾಲ ಕಾಪೂರ ಮಾತನಾಡುತ್ತಾ, ಭಾರತ ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ನಮ್ಮ ದೇಶದ ಅಭಿವೃದ್ಧಿ ಮತದಾರರನ್ನು ಅವಲಂಬಿಸಿದೆ. ಪ್ರತಿಯೊಬ್ಬರು ಮತದಾನದ ಹಕ್ಕುನ್ನು ಪಡೆದುಕೊಳ್ಳಬೇಕು. ಚುನಾವಣೆಯ ಸಂದರ್ಭದಲ್ಲಿ ಅದನ್ನು ನ್ಯಾಯಯುತವಾಗಿ ಬಳಕೆ ಮಾಡಿಕೊಳ್ಳಬೇಕು. ಭವಿಷ್ಯದಲ್ಲಿ ಉತ್ತಮ ಅಭ್ಯರ್ಥಿಯ ಆಯ್ಕೆಗೆ ಮತದಾನ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇದನ್ನು ಇಂದಿನ ಯುವ ಜನಾಂಗ ಅರಿತುಕೊಳ್ಳಬೇಕು. ಭವ್ಯ ಭಾರತದ ಭವಿಷ್ಯ ರೂಪಿಸಬೇಕು.
ಯಾವುದೇ ಜಾತಿ ಧರ್ಮ, ಜನಾಂಗ, ಭಾಷೆ, ಭಯದೊಂದಿಗೆ ಮತ ಚಲಾವಣೆ ಮಾಡದೆ ನಿರ್ಭೀತವಾಗಿ ಚುನಾವಣೆಯಲ್ಲಿ ಭಾಗವಹಿಸುತ್ತೇವೆಂದು ಪ್ರತಿಜ್ಞೆ ಮಾಡುವ ದಿನ ಇದಾಗಿದೆ ಎಂದು ಹೇಳಿದರು.
ಭಾರತ ಚುನಾವಣಾ ಆಯೋಗದ ಸಂಸ್ಥಾಪನಾ ದಿನವಾದ ಇಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ. ಮೊದಲ ಬಾರಿಗೆ ಮತದಾರರಾಗಿ ನೋಂದಾವಣೆಯಾಗಿರುವವರಿಗೆ ಅಂದು ಗುರುತಿನ ಕಾರ್ಡ್ ಅನ್ನು ಮತಗಟ್ಟೆಯಲ್ಲಿ ವಿತರಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

