ಸೂಕ್ತ ವ್ಯಕ್ತಿ ಆಯ್ಕೆಗೆ ಡಿಸಿ ಸಲಹೆ
ಯಾದಗಿರಿ: ಸುಭದ್ರ ಭಾರತ ನಿರ್ಮಾಣಕ್ಕಾಗಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕೆಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ವಿದ್ಯಾವತಿ ಅಕ್ಕಿಯವರು ಮತದಾರರಿಗೆ ಕರೆ ನೀಡಿದ್ದಾರೆ.
ಜಿಲ್ಲಾಡಳಿತ ಮತ್ತು ಚುನಾವಣೆ ಆಯೋಗದ ವತಿಯಿಂದ ಶನಿವಾರ ಇಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಫಾಟಿಸಿ ಮಾತನಾಡುತ್ತಿದ್ದ ಅವರು, ಸುಭದ್ರ ಭಾರತ ನಿರ್ಮಾಣಕ್ಕೆ ದೇಶದ ಚುಕ್ಕಾಣಿ ಉತ್ತಮ ವ್ಯಕ್ತಿಗಳ ಕೈಯಲ್ಲಿರಬೇಕು. ಹಾಗಾಗಿ ದೇಶವನ್ನು ಮುನ್ನಡೆಸುವ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕೆಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಿ ಮಾತನಾಡಿದರು. ಮತದಾರರ ಗುರುತಿನ ಚೀಟಿಯು ಭಾರತೀಯ ನಾಗರಿಕತೆ ಬಗೆಗಿನ ಮಹತ್ವದ ಸಾಕ್ಷ್ಯವಾಗಿದೆ. ಅದರಂತೆ ಮತದಾರರ ಗುರುತಿನ ಚೀಟಿ ಪಡೆದು ಚುನಾವಣೆಗಳಲ್ಲಿ ತಪ್ಪದೇ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಯಾವುದೇ ಒತ್ತಡಗಳಿಗೆ ಮಣಿಯದೇ ಸ್ವತಂತ್ರವಾಗಿ ಮತಚಲಾಯಿಸಬೇಕೆಂದು ಹೇಳಿದರು. ನ್ಯಾ. ವಿದ್ಯಾವತಿ ಅಕ್ಕಿಯವರು ಯುವ ಮತದಾರರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

