ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
ಕನ್ನಡಪ್ರಭ ವಾರ್ತೆ ಸುರಪುರ ಜ.25
ಪ್ರಜಾ ಪ್ರಭುತ್ವ ರಾಷ್ಟ್ರವೆನಿಸಿಕೊಂಡಿರುವ ದೇಶದಲ್ಲಿ ಯುವ ಜನತೆ ಸಕ್ರಿಯವಾಗಿ ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಹಸೀಲ್ದಾರ್ ಅರುಣಕುಮಾರ ಕುಲಕರ್ಣಿ ಕರೆ ನೀಡಿದ್ದಾರೆ.
ಇಲ್ಲಿನ ಮಿನಿ ವಿಧಾನಸೌಧದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು ಮಾತನಾಡಿ, ಎಲ್ಲರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಹೇಳಿದರು.
ಮತದಾನ ಪ್ರಕ್ರಿಯೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜಾತಿ, ಭಾಷೆ ಅಥವಾ ಯಾವುದೇ ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿದಲ್ಲಿ ಪ್ರಜಾ ಪ್ರಭುತ್ವದ ಅಡಿಪಾಯ ಗಟ್ಟಿಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ, ಸರ್ಕಾರೇತರ ಸಂಘ ಸಂಸ್ಥೆಗಳು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ತಾಲೂಕಿನಲ್ಲಿ ಜರುಗಿದ ಮತ ಪರಿಷ್ಕರಣೆಯಲ್ಲಿ 18 ಸಾವಿರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿವೆ ಎಂದರು.
ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ ಮಾತನಾಡಿ, ಪ್ರಜಾ ಪ್ರಭುತ್ವದ ಯಶಸ್ಸು ಮತದಾರರನ್ನು ಅವಲಂಬಿಸಿದೆ, ಸುಭದ್ರ ದೇಶದ ನಿರ್ಮಾಣದಲ್ಲಿ ಮತದಾರರೇ ನಿರ್ಣಾಯಕರು. ಸಂವಿಧಾನದತ್ತವಾಗಿ ಪಡೆದಿರುವ ಮತದಾನದ ಹಕ್ಕನ್ನು ಚಲಾಯಿಸುವುದರ ಮೂಲಕ ಸುಭದ್ರ ಭಾರತ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದರು.
ಹುಣಸಗಿ ವಿಶೇಷ ತಹಸೀಲ್ದಾರ್ ಬಸವರಾಜ ಅಂಬರಶೆಟ್ಟಿ, ಕಂದಾಯ ನಿರೀಕ್ಷಕರಾದ ಅಣವೀರಪ್ಪ, ನರೇಶ ಹಳ್ಳದ, ಸುಬ್ಬರಾವ್ ಕಲಕಣರ್, ಅಶೋಕ ಸುರಪುರಕರ್, ಆಹಾರ ಇಲಾಖೆ ಶಿರಸ್ತೇದಾರ್ ಪುರಸಭೆ ಸಿಬ್ಬಂದಿ ಇದ್ದರು.
ಕಾಮನಟಗಿಯಲ್ಲಿ ...ಭಾರತ ಚುನಾವಣಾ ಆಯೋಗದ ಸಂಸ್ಥಾಪನಾ ದಿನವಾಗಿದ್ದು, ಇದನ್ನು ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಕಾಮನಟಗಿ ಗ್ರಾಮ ಲೇಖಪಾಲಕ ಹಣಮಂತರಡ್ಡಿ ಮಾಲಿಪಾಟೀಲ್ ತಿಳಿಸಿದರು.
ಸಮೀಪದ ಕಾಮನಟಗಿ ಗ್ರಾಮದಲ್ಲಿ ನಡೆದ ಮತಗಟ್ಟೆ ಸಂಖ್ಯೆ 196-97ರ ಮತದಾರರ ದಿನಾಚರಣೆಯಲ್ಲಿ ಮಾತನಾಡಿ, ಲಕ್ಷಾಂತರ ಯುವಜನತೆ ಜನವರಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಮತದಾರರಾಗಿ ನೋಂದಣಿಗೊಳ್ಳುತ್ತಾರೆ. ಪ್ರಜಾಪ್ರಭುತ್ವ ಬಲಗೊಳಿಸಲು, ಚುನಾವಣೆ ಪ್ರಕ್ರಿಯೆಗಳಲ್ಲಿ ನೆರವಾಗಲು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಸಹಾಯಕ ನಾಗೇಶ, ಅಂಗನವಾಡಿ ಕಾರ್ಯಕರ್ತೆರಾದ ಭೀಮಬಾಯಿ, ಪೂಜಾ, ಸಂಜೀವಪ್ಪ ಕೊಟೇಗುಡ್ಡ, ವಿಶ್ವನಾಥ ರಡ್ಡಿ, ಮುಕ್ಕಣ್ಣಗೌಡ, ದತ್ತಾತ್ರೇಯ ಜಹಾಗೀರದಾರ, ಮಾನಪ್ಪ, ಪರಮಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

