ಆಂದೋಲಾ ಗ್ರಾಪಂ ಅವ್ಯವಹಾರ ತನಿಖೆಗೆ ಆಗ್ರಹ
ಜೇವರ್ಗಿ: ತಾಲೂಕಿನ ಆಂದೋಲಾ ಗ್ರಾಮ ಪಂಚಾಯ್ತಿಯಲ್ಲಿ ಕಳೆದ 3 ವರ್ಷಗಳಲ್ಲಿ ನಡೆದ ಅವ್ಯವಹಾರವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶ್ರೀರಾಮ ಸೇನೆಯ ರಾಜ್ಯ ಗೌರವಾಧ್ಯಕ್ಷ ಹಾಗೂ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.
2011 ರಿಂದ ಜ.2014 ರವರೆಗೆ ಗ್ರಾಪಂ 13ನೇ ಹಣಕಾಸು ಯೋಜನೆಯಲ್ಲಿ ಕುಡಿಯುವ ನೀರಿಗಾಗಿ 25 ಲಕ್ಷ ಖರ್ಚು ಮಾಡಿದ್ದಾರೆ. ಆದರೆ ಇದುವರೆಗೆ ಗ್ರಾಮಸ್ಥರಿಗೆ ಸಮರ್ಪಕ ಕುಡಿವ ನೀರು ಪೂರೈಸಿಲ್ಲ.
ಖಾತ್ರಿ ಯೋಜನೆಯಲ್ಲಿ 25 ಲಕ್ಷ ಅವ್ಯವಹಾರ ನಡೆದಿದೆ. ಕಾಮಗಾರಿ ನಡೆಸದೆ ಬಿಲ್ಗಳನ್ನು ಪಡೆದಿದ್ದಾರೆ. 2011-12ನೇ ಸಾಲಿನಲ್ಲಿ ಆಂದೋಲಾ ಗ್ರಾಮಕ್ಕೆ ಜಲ ನಿರ್ಮಲ ಯೋಜನೆಯಲ್ಲಿ 60 ಲಕ್ಷ ಅನುದಾನ ಬಿಡುಗಡೆಯಾಗಿದೆ. ಅನುದಾನದ ಪ್ರತಿಶತ 10ರಷ್ಟು ಗ್ರಾಮಸ್ಥರಿಂದ ವಂತಿಗೆ ಹಣ ಪಡೆದು ಕಟ್ಟಬೇಕು. ಗ್ರಾಮಸ್ಥರು ಅಥವಾ 13ನೇ ಹಣಕಾಸಿನಲ್ಲಿ ಕ್ರಿಯಾಯೋಜನೆ ಪ್ರಕಾರ ವಂತಿಗೆ ಹಣ 5.70 ಲಕ್ಷ ಪಾವತಿಸಬೇಕು. ಅದರಲ್ಲಿ 2 ಲಕ್ಷ ಜಲ ನಿರ್ಮಲ ವಂತಿಗೆ ಕಟ್ಟಲಾಗಿದೆ. ಉಳಿದ 3.70 ಲಕ್ಷ ದುರ್ಬಳಕೆಯಾಗಿದೆ. 3.70 ಲಕ್ಷ ಕಾಮಗಾರಿ ಪಡೆದ ಗುತ್ತಿಗೆದಾರರಿಂದ ಕಟ್ಟಿಸಿದ್ದಾರೆ. ಮುಖ್ಯಮಂತ್ರಿಗಳು, ಲೋಕಾಯುಕ್ತರು ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಮನಿಷ್ ಮೌದ್ಗಿಲ್ ಅವರಿಗೆ ದೂರು ಸಲ್ಲಿಸಲಾಗಿದೆ. ಆದರೆ ಇದುವರೆಗೂ ಆಂದೋಲಾ ಪಂಚಾಯ್ತಿಯಲ್ಲಿ ನಡೆದ ಅವ್ಯವಹಾರದ ಕುರಿತು ತನಿಖೆ ನಡೆಸಿಲ್ಲ. ತಕ್ಷಣ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗ್ರಾಪಂ.ಯಲ್ಲಿ ನಡೆದ ಅವ್ಯವಹಾರ ಬಗ್ಗೆ ತನಿಖೆ ನಡೆಸದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಆಂದೋಲಾ ಶ್ರೀಗಳು ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

