ಗುಲ್ಬರ್ಗಾ

ಶಾಲೆಗೆ ಮೂಲ ಸೌಕರ್ಯ ಕಲ್ಪಿಸಿ

Published On :

ಗುಲ್ಬರ್ಗ: ನಗರದ ಕೋರಂಟಿ ಹನುಮಾನ ದೇವಸ್ಥಾನ ಸಮೀಪದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಜೈ ಕರ್ನಾಟಕ ರಕ್ಷಣಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಮೋಹನಕರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಶಾಲೆ ಎದುರು ಪ್ರತಿಭಟನೆಗಿಳಿದ ಜೈ ಕರವೇ ಪದಾಧಿಕಾರಿಗಳು, ಶಾಲೆಯಲ್ಲಿ 200 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, 8 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆಂದು ತಿಳಿಸಿದ್ದಾರೆ.
ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಮಾಡಲಾಗಿಲ್ಲ. ವಿದ್ಯಾರ್ಥಿಗಳು ಅಕ್ಕಪಕ್ಕದ ಮನೆಗಳಲ್ಲಿ ನೀರು ಬೇಡಿ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯಗಳಿದ್ದರೂ ಯಾವುದೇ ಪ್ರಯೋಜನಕ್ಕೆ ಬಾರದೆ ಸಂಪೂರ್ಣವಾಗಿ ಹದಗೆಟ್ಟಿದೆ. ನಗರದಿಂದ ಹೊರವಲಯದಲ್ಲಿರುವ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಒತ್ತಾಯಿಸಿದ್ದಾರೆ. ಸಾಕಷ್ಟು ಹಣ ಖರ್ಚು ಮಾಡಿ ಕಂಪ್ಯೂಟರ್‌ಗಳನ್ನು ಖರೀದಿಸಲಾಗಿದೆ. ಆದರೆ ವಿದ್ಯುತ್ ಸಂಪರ್ಕವಿಲ್ಲದರಿಂದ ಕಂಪ್ಯೂಟರ್‌ಗಳು ಧೂಳು ಹಿಡಿದು ಹಾಳಾಗುತ್ತಿವೆ.
ಈ ಎಲ್ಲಾ ಅಂಶಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ. ಈಗಲಾದರೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮೋಹನಕುಮಾರ ಹೇಳಿದ್ದಾರೆ.
ನಾಗರಾಜ, ಅಪ್ಪಿ, ವಿಶಾಲ್, ಸಂದೀಪ್, ಸಿವುಕುಮಾರ, ರವಿ, ಪಿಂಟು, ಶಂಬು, ಸಂತೋಷ, ಮಂಜನಾಥ, ಚೇತನ, ಸುರೇಶ, ನಾಗು, ಪವನ ಇತರರು ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.