ಸೋನಿಯಾ ಜತೆ ಚರ್ಚಿಸಲು ನಿಗದಿಗೆ ಮನವಿ
ಗುಲ್ಬರ್ಗ: ಫೆ.1ರಂದು ಗುಲ್ಬರ್ಗಕ್ಕೆ ಆಗಮಿಸಲಿರುವ ಸೋನಿಯಾಗಾಂಧಿಯವರ ಜೊತೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಸಮಯಾವಕಾಶ ನಿಗದಿಪಡಿಸಬೇಕೆಂದು ಕರ್ನಾಟಕ ರಾಜ್ಯ ರೈತಸಂಘವು ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.
ಕಲ್ಬುರ್ಗಿ ವಿಭಾಗದ ಪ್ರಮುಖ ಬೆಳೆಗಳಾದ ಬಿಳಿಜೋಳ, ತೊಗರಿ, ಕಡಲೆ, ಶೇಂಗಾ ಹಾಗೂ ಭತ್ತದ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ವಿಶೇಷವಾಗಿ ಕಬ್ಬು ಬೆಳೆಗಾರರು ಕೂಡ ಇಲ್ಲಿ ನೀರಾವರಿ ಪಂಪ್ಸೆಟ್ಗಳ ನೆರವಿನಿಂದ ಬೆಳೆ ತೆಗೆಯುತ್ತಿದ್ದರೂ ಸಾಗುವಳಿ ವೆಚ್ಚ ವಿಪರೀತ ಹೆಚ್ಚಾಗಿ ಬೆಳೆದ ಕಬ್ಬಿಗೆ ಸರಿಯಾದ ಬೆಲೆ ಸಿಗದೆ ಪರದಾಡುತ್ತಿದ್ದಾರೆ.
ಇದರ ಬಗ್ಗೆ ಹಲವಾರು ಬಾರಿ ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಆದಕ್ಕಾರಣ ಫೆ.1 ರಂದು ಆಗಮಿಸಲಿರುವ ಸೋನಿಯಾಗಾಂಧಿ ಜೊತೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಅವಕಾಶ ಕೊಡಬೇಕೆಂದು ಕರ್ನಾಟಕ ರೈತಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧ್ಯಕ್ಷ ದೊಡ್ಡಪ್ಪ ಕಾಮ, ಗೌರವಾಧ್ಯಕ್ಷ ಗುರುಲಿಂಗಪ್ಪ ಪಾಟೀಲ್ ನರಸಿಂಗರಾವ್ ಬಿ. ಕುಲ್ಕರ್ಣಿ, ಸಿದ್ದಲಿಂಗರೆಡ್ಡಿ ಕೋಡ್ಲಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

