ದಲಿತರಿಗೆ ಬಹಿಷ್ಕಾರ ಖಂಡಿಸಿ ದಸಸ ಪ್ರತಿಭಟನಾ ರ್ಯಾಲಿ
ಚಿಂಚೋಳಿ: ಕೋಲಾರ ಜಿಲ್ಲೆಯ ಕಗ್ಗನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಬುಧವಾರ ಚಿಂಚೋಳಿ ತಾಲೂಕ ದಲಿತ ಸಮನ್ವಯ ಸಮಿತಿ ಮುಖಂಡರು ರಸ್ತೆತಡೆ ಹಾಗೂ ಭಾರಿ ಪ್ರತಿಭಟನಾ ರ್ಯಾಲಿ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಪಟ್ಟಣದ ಬಸ್ನಿಲ್ದಾಣದ ಹತ್ತಿರದ ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಜಿಪಂ ಸದಸ್ಯ ಸಂಜೀವನ್ ಯಾಕಾಪುರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಸರ್ಕಾರ ದಲಿತರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಕೋಲಾರ ಜಿಲ್ಲೆಯ ಕಗ್ಗನಹಳ್ಳಿ ಗ್ರಾಮದಲ್ಲಿ ಕೇವಲ ಮುಖ್ಯ ಅಡುಗೆಯ ಕೆಲಸಕ್ಕೆ ದಲಿತ ಮಹಿಳೆಯೊಬ್ಬಳು ಅರ್ಜಿ ಹಾಕಿದ್ದೇ ನೆಪ ಮಾಡಿಕೊಂಡು ದಲಿತರಿಗೆ ಬಹಿಷ್ಕಾರ ಹಾಕಿರುವುದು ತುಂಬಾ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬಹಿಷ್ಕಾರ ಹಾಕಿ ದಲಿತರಿಗೆ ಶೋಷಣೆ ಮಾಡುವುದು ಅನ್ಯಾಯ. ಸರ್ಕಾರ ದಲಿತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಜಿಪಂ ಸದಸ್ಯ ಸಂಜೀವನ್ ಯಾಕಾಪುರ ಅಗ್ರಹ ಪಡಿಸಿದರು.
ಪ್ರತಿಭಟನೆಯಲ್ಲಿ ಪಾಂಡುರಂಗ ಲೊಡನೂರ, ವಾಮನರಾವ ಕೊರವಿ, ಕಾಶಿನಾಥ ಸಿಂಧೆ, ಸಂಜೀವಕುಮಾರ ಟೈಗರ್, ಆನಂದ ಟೈಗರ್, ಭರತ ಬುಳ್ಳ, ಗೌತಮ್ ಬೊಮ್ಮನಳ್ಳಿ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

