ಗುಲ್ಬರ್ಗಾ

ಜಿಲ್ಲಾ ಕಸಾಪ ಭವನ ನಿರ್ಮಾಣ ಅನುದಾನಕ್ಕೆ ಜಿಪಂಗೆ ಮನವಿ

Published On :

ಯಾದಗಿರಿ: ಜಿಲ್ಲಾ ಕಸಾಪ ಭವನ ನಿರ್ಮಾಣಕ್ಕಾಗಿ ಜಿಪಂ ಅನುದಾನ ನೀಡಬೇಕೆಂದು ಒತ್ತಾಯಿಸಿ ಪರಿಷತ್ತಿನ ನಿಯೋಗ ಜಿಪಂ ಅಧ್ಯಕ್ಷ ಸಿದ್ದಣ್ಣಗೌಡ ಪೊಲೀಸ್ ಪಾಟೀಲರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಪ್ಪಹೊಟ್ಟಿ, ಯಾದಗಿರಿ ಜಿಲ್ಲೆಯಾದ ಮೇಲೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಸ್ತಿತ್ವಕ್ಕೆ ಬಂದಿದೆ. ಪರಿಷತ್ತು ಜಿಲ್ಲೆಯಲ್ಲಿ ಅನೇಕ ಸಾಹಿತಿಕ, ಸಾಂಸ್ಕೃತಿಕ, ಚಟುವಟಿಕೆಗಳನ್ನು ನಡೆಸುವ ಮೂಲಕ ನಾಡು ನುಡಿಯ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಹಾಗಾಗಿ ಜಿಲ್ಲಾ ಕೇಂದ್ರದಲ್ಲಿ ಕಸಾಪ ಕನ್ನಡ ಭವನ ಅಗತ್ಯವಿದ್ದು, ಪ್ರಾಧಿಕಾರ ಈಗಾಗಲೇ 15 ಲಕ್ಷ ಸಹಾಯ ಧನ ಮಂಜೂರು ಮಾಡಿದೆ. ಕಟ್ಟಡ ಕಾಮಗಾರಿಗೆ 48.50 ಲಕ್ಷ ಅಗತ್ಯವಿದೆ ಎಂದು ತಿಳಿಸಿದರು. ಜಿಪಂ ವತಿಯಿಂದ 10 ಲಕ್ಷ ಅನುದಾನ ನೀಡುವ ಮೂಲಕ ಪರಿಷತ್ ಭವನ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನಳ್ಳಿ, ತಾ. ಕಸಾಪ ಅಧ್ಯಕ್ಷ ಶ್ರೀನಿವಾಸ ಕರ್ಲಿ, ಮಾಜಿ ಅಧ್ಯಕ್ಷ ಅಯ್ಯಣ್ಣ ಹುಂಡೆಕಾರ, ಹಾಗೂ ಆರ್. ಮಹಾದೇವಪ್ಪ ಗೌಡ ಅಬ್ಬೆತೂಮಕೂರ, ಮೈಪಾಲರೆಡ್ಡಿ ದುಪ್ಪಲ್ಲಿ, ನೂರೊಂದಪ್ಪ ಲೇವಡಿ, ದೇವರಾಜ ವರ್ಕನಳ್ಳಿ, ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.