ಸಹಕಾರಿ ಸಂಘಗಳ ಪ್ರಗತಿಗೆ ಯೋಜನೆ
ಯಾದಗಿರಿ: ಜಿಲ್ಲೆಯಲ್ಲಿ ನಿಷ್ಕ್ರಿಯರಾಗಿರುವ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘಗಳ ಪ್ರಗತಿಗೆ ಅಗತ್ಯ ಯೋಜನೆಗಳನ್ನು ರೂಪಿಸಿ ಆರ್ಥಿಕ ಪ್ರಗತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ ಶಂಕ್ರಪ್ಪಗೌಡ ಪಾಟೀಲ್ ಬಳಿಚಕ್ರ ಹೇಳಿದರು.
ನಗರದ ಚರ್ಚ್ಹಾಲ್ನಲ್ಲಿ ಒಕ್ಕೂಟ ಹಾಗೂ ಜಿಲ್ಲೆಯಲ್ಲಿರುವ ಸಹಕಾರಿ ಸಂಘಗಳ ಪದಾಧಿಕಾರಿಗಳು ಬುಧವಾರ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ಎಣ್ಣೆ ಬೀಜಗಳ ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ದೊರಕಿಸಿಕೊಡಲು ಒಕ್ಕೂಟದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಬದಲಾವಣೆಗೆ ಶ್ರಮಿಸಿ: ರೈತರು ಮತ್ತು ಗ್ರಾಹಕರಿಗಾಗಿ ಒಕ್ಕೂಟವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅಧಿಕಾರಿಗಳು ಹಾಗೂ ಸಂಘದ ಪದಾಧಿಕಾರಿಗಳು ಅವುಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಜನರ ವಿಶ್ವಾಸ ಹೆಚ್ಚಿನ ಮಟ್ಟದಲ್ಲಿ ಗಳಿಸುವ ಮೂಲಕ ಬದಲಾವಣೆಗೆ ಶ್ರಮಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕರಾದ ಕೆಚ್ಚಪ್ಪ ಮಾತನಾಡಿ, ಜಿಲ್ಲೆಯಲ್ಲಿ 28 ಸಹಕಾರಿ ಸಂಘಗಳಲ್ಲಿ 6 ಸಂಘಗಳು ಮಾತ್ರ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಕಾರಣ ಸಹಕಾರಿ ಧುರೀಣರು ಹಾಗೂ ಸಂಘದ ಪದಾಧಿಕಾರಿಗಳು ನಿಯಮದಂತೆ ಸಭೆ ಕರೆದು ಚರ್ಚಿಸಿ ಚಟುವಟಿಕೆಗಳನ್ನು ಆರಂಭಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಲ್ಲಣಗೌಡ ಕೌಳೂರ್, ನಿರ್ದೇಶಕ ಮಹಾಂತೇಶ ಪಾಟೀಲ್ ಅತ್ತನೂರ್, ಸುಧೀರ್ ಆಸಪಲ್ಲಿ, ವ್ಯವಸ್ಥಾಪಕ ಶಿವುಕುಮಾರ ಸ್ವಾಮಿ, ವೀರಣ್ಣ ರ್ಯಾಖಾ, ಬಸವರಾಜಪ್ಪಗೌಡ ವಡಿಗೇರಿ, ಗಂಗಾಧರ ಇದ್ದರು. ಕೆಒಎಫ್ ಅಧಿಕಾರಿ ಬಸವರಾಜ ಉಳಾಗಡ್ಡಿ ನಿರೂಪಿಸಿ ಸ್ವಾಗತಿಸಿದರು. ಆರ್.ಜಿ. ಪಾಟೀಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

