ಗುಲ್ಬರ್ಗಾ

5 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಆರ್ವಿಎನ್ ಗುದ್ದಲಿ ಪೂಜೆ

Published On :

ಸುರಪುರ: ವಾರ್ಡಿನ ಅಭಿವೃದ್ಧಿಗೆ ನಾಗರಿಕರ ಸಹಕಾರ ಅತ್ಯಗತ್ಯ. ಪಟ್ಟಣದ ಸುರಪುರ ರಂಗಂಪೇಟೆ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ನಗರೋತ್ಥಾನ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಕೈಗೊಂಡಿರುವ 5 ಕೋಟಿ ವೆಚ್ಚದ ಕಾಮಗಾರಿಗಳ ನಿರ್ಮಾಣದಲ್ಲಿ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸದೇ ಗುಣಮಟ್ಟ ಕಾಯ್ದುಕೊಳ್ಳಿರಿ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ತಿಳಿಸಿದರು.
ಝಂಡದಕೇರಾ ಮತ್ತು ರಂಗಂಪೇಟೆಯ ದೊಡ್ಡ ಬಜಾರ್‌ನಲ್ಲಿ ನಗರೋತ್ಥಾನ ಯೋಜನೆಯ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿ, ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗಳನ್ನು ಅಚ್ಚುಕಟ್ಟಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಭೂಸೇನಾ ನಿಗಮ ಮತ್ತು ಪುರಸಭೆ ಅಧಿಕಾರಿಗಳು ಪ್ರತಿ ಹಂತದಲ್ಲೂ ಕಾಮಗಾರಿ ವಿಕ್ಷೀಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯ. ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಹೋಗಬೇಕು. ಪಟ್ಟಣದ ಸೌಂದರೀಕರಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಪಟ್ಟಣದಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆಗೆ ಕಳೆದೆರೆಡು ದಿನಗಳ ಹಿಂದೆ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿ, ನಾರಾಯಣಪುರದ ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಿಸಿದ್ದೇನೆ. ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ, ಪಟ್ಟಣಕ್ಕೆ 25 ಕೊಳವೆ ಬಾವಿಗಳು ಮಂಜೂರು ಮಾಡಿಸಿದ್ದೇನೆ. ಅವಶ್ಯವಿರುವ ಕಡೆಗಳಲ್ಲಿ ಅವುಗಳನ್ನು ಶೀಘ್ರವೇ ಕೊರೆಯಿಸಲಾಗುವುದು ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಗುರುಬಾಯಿ ವಾಲಿ, ವಿಪ ನಾಯಕ ವೇಣುಮಾಧವನಾಯಕ, ಮುಖ್ಯಾಧಿಕಾರಿ ಏಜಾಜ್ ಹುಸೇನ್, ವೆಂಕಟೇಶ್ ಹೊಸ್ಮನಿ, ರಾಜಾ ಜೈರಾಮ ನಾಯಕ, ಪಾರಪ್ಪ ಗುತ್ತೇದಾರ್, ಅಪ್ಸರ್ ಹುಸೇನ್, ಮಹಿಬೂಬ್ ಒಂಟಿ, ಖಾಲೀದ್ ಅಹ್ಮದ್ ತಾಳಿಕೋಟಿ, ವೆಂಕಟೇಶ ಶುಕ್ಲಾ, ಮನೋಹರ ಕುಂಟೋಜಿ, ಮಲ್ಲಪ್ಪ ಐಕೂರು, ಮಾನಪ್ಪ ಪ್ಯಾಪ್ಲಿ, ಎಕ್ಬಾಲ್ ವರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.