ಗುಲ್ಬರ್ಗಾ

ಆಸ್ಪತ್ರೆ ಅವ್ಯವಸ್ಥೆಗೆಗುತ್ತೇದಾರ ಗರಂ

Published On :

ಅಫಜಲ್ಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶಾಸಕ ಮಾಲಿಕಯ್ಯ ಗುತ್ತೇದಾರ  ಶನಿವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಗರಂ ಆದ ಘಟನೆ ಜರುಗಿದೆ. ಆಸ್ಪತ್ರೆ ಸ್ವಚ್ಛತೆ, ಸಿಬ್ಬಂದಿ ಕಾರ್ಯವೈಖರಿ, ಸಿಬ್ಬಂದಿ ಹಾಜರಿ ಪುಸ್ತಕ, ಔಷಧ ವಿತರಣಾ ಮಳಿಗೆ ಮತ್ತು ರೋಗಿಗಳ ವಾರ್ಡ್‌ಗಳನ್ನು ವೀಕ್ಷಿಸಿ ವ್ಯವಸ್ಥೆ ಸರಿಪಡಿಸುವಂತೆ ಆಸ್ಪತ್ರೆಯ ವೈದ್ಯಾಧಿಕಾರಿ ಎಸ್.ಬಿ. ಚಿಕ್ಕಳಗಿ ಮತ್ತು ಸಹಾಯಕ ಸಿಬ್ಬಂದಿಗೆ ಸೂಚಿಸಿದರು. ಸುಮಾರು ಒಂದು ವರ್ಷದಿಂದ ಆಸ್ಪತ್ರೆಗೆ ಗೈರು ಹಾಜರಾಗಿರುವ ವೈದ್ಯ ಡಾ. ಅನಿಲ್ ಪಟ್ಟಣಶೆಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಿ ಬೇರೊಬ್ಬರನ್ನು ನೇಮಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ಶಿವರಾಜ ಸಜ್ಜನಶೆಟ್ಟಿ ಅವರಿಗೆ ದೂರವಾಣಿ ಮುಖಾಂತರ ಸೂಚಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ರೇವೂರ, ಮಹಾಂತೇಶ ಪಾಟೀಲ್, ಎಪಿಎಂಸಿ ಅಧ್ಯಕ್ಷ ಬಿ.ವೈ. ಪಾಟೀಲ್, ಶಾಂತಯ್ಯ ಹಿರೇಮಠ, ಸಿದ್ದಣಗೌಡ ರೇವೂರ(ಬಿ), ಧಾನು ಫತಾಟೆ, ಶ್ರೀಶೈಲ ಬಳೂರ್ಗಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.