ರೇವನೂರ ಶಾಲೆಗೆ ಶಾಸಕ ಅಜಯಸಿಂಗ್ ಭೇಟಿ

Updated on: 

ಜೇವರ್ಗಿ: ತಾಲೂಕಿನ ರೇವನೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಇತ್ತೀಚೆಗೆ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಶಾಲೆಯಲ್ಲಿ ಕಳೆದ 15 ದಿನಗಳಿಂದ ಬಿಸಿಯೂಟ ಸ್ಥಗಿತಗೊಂಡಿದೆ ಎಂಬ ಮಾಹಿತಿ ಪಡೆದ ಶಾಸಕರು, ರೇವನೂರ ಶಾಲೆಗೆ ಭೇಟಿ ನೀಡಿ ವಿಚಾರಿಸಿದಾಗ ಅಡುಗೆ ಅನಿಲದ ಕೊರತೆಯಿದೆ ಎಂದು ಶಿಕ್ಷಕರು ತಿಳಿಸಿದರು.
ಯಾವುದೇ ಕಾರಣಕ್ಕೂ ಅಕ್ಷರ ದಾಸೋಹ ಯೋಜನೆ ನಿಲ್ಲಿಸದಂತೆ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕಟ್ಟುನಿಟ್ಟಾಗಿ ಸೂಚಿಸಿದರು. ಶಾಸಕರು ಶಾಲೆಯಲ್ಲಿರುವ ಮಕ್ಕಳ ದಾಖಾಲಾತಿ, ಹಾಜರಾತಿ ಹಾಗೂ ಶಿಕ್ಷಣದ ಗುಣಮಟ್ಟ ಕುರಿತು ದಾಖಲಾತಿ ಪರಿಶೀಲಿಸಿದರು. ಶಾಲೆಯ ಪ್ರತಿಯೊಂದು ತರಗತಿಗೆ ತೆರಳಿ ಮಕ್ಕಳಿಂದ ಶೈಕ್ಷಣಿಕ ಸಮಸ್ಯೆಗಳನ್ನು ಆಲಿಸಿದರು.
ನಂತರ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು. ಗ್ರಾಮದಲ್ಲಿನ ಮೂರು ಅಂಗನವಾಡಿ ಕೇಂದ್ರಗಳಿಗೆ ಬೀಗ ಹಾಕಲಾಗಿತ್ತು. ಇದರಿಂದ  ಸಿಡಿಮಿಡಿಗೊಂಡ ಶಾಸಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡರು. ಸಿದ್ರಾಮಪ್ಪ ಗೌಡ ಹರನೂರ, ನಿಂಗಣ್ಣ ನೇರಡಗಿ, ಶಂಕರಲಿಂಗ ಹನ್ನೂರ, ಮಲ್ಲಿಕಾರ್ಜುನ ಹನ್ನೂರ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com