ಗುಲ್ಬರ್ಗದಲ್ಲಿ ಕೆಎಟಿ ಪೀಠ ಸ್ಥಾಪನೆಗೆ ಮನವಿ
ಆಳಂದ: ಗುಲ್ಬರ್ಗದಲ್ಲೂ ಕೆಎಟಿ ಪೀಠ ಸ್ಥಾಪನೆಗೆ ಒತ್ತಾಯಿಸಿ ಸ್ಥಳೀಯ ವಕೀಲರು ಮಂಗಳವಾರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗೇಶ ರೆಡ್ಡಿ ನೇತೃತ್ವದಲ್ಲಿ ಪ್ರಮುಖ ವಕೀಲರು ಸೇರಿ ತಹಸೀಲ್ದಾರ್ ಬಸವರಾಜ ಅಂಬರಶೆಟ್ಟಿ ಅವರ ಮೂಲಕ ಪೀಠ ಸ್ಥಾಪಿಸುವಂತೆ ಸರ್ಕಾರವನ್ನು ಆಗ್ರಹಿಸಿದರು. ಹಿಂದುಳಿದ ಈ ಭಾಗದಲ್ಲಿ ಕೆಎಟಿ ಪೀಠ ಸ್ಥಾಪನೆ ಅತ್ಯಂತ ಅಗತ್ಯವಾಗಿದೆ. ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಪೀಠ, ಕರ್ನಾಟಕ ಸಹಕಾರ ಮೇಲ್ಮನವಿ ನ್ಯಾಯಮಂಡಳಿ ಅನ್ನು ಗುಲ್ಬರ್ಗ ಹೈಕೋರ್ಟ್ ಪೀಠದಲ್ಲೇ ಸ್ಥಾಪಿಸುವ ಮೂಲಕ ಈ ಭಾಗದ ನ್ಯಾಯವಾದಿಗಳಿಗೆ ಮತ್ತು ಕಕ್ಷಿದಾರರಿಗೆ ಅನುಕೂಲ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಂಘದ ಕಾರ್ಯದರ್ಶಿ ಶಿವಶಂಕರ ಮುನ್ನೊಳ್ಳಿ, ಹಿರಿಯ ನ್ಯಾಯವಾದಿ ಎಸ್.ಎ. ಪಾಟೀಲ, ವೈಹೀದ್ ಅನ್ಸಾರಿ, ಎ.ಸಿ. ತೋಳೆ, ಎಂ.ವಿ. ಎಕಬೋಟೆ, ಎಂ.ಕೆ. ಗೋವಿನ, ಬಲಭೀಮ ಶಿಂಧೆ, ಬಿ.ಐ. ಶಿರೋಳೆ, ಎಸ್.ವೈ. ಉಡಗಿ, ಎಸ್.ಎ. ಮರಗುತಿ, ಶರಣಬಸಪ್ಪಾ ಗಡಬಳಿ, ಭರತೇಶ ಸೇರಿದಂತೆ ಇನ್ನಿತರರು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ತಹಸೀಲ್ದಾರ್ ಬಸವರಾಜ ಅಂಬರಶೆಟ್ಟಿ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

