ಕ.ಪ್ರ. ವಾರ್ತೆ ಯಾದಗಿರಿ ಜು. 15
ರಾಜ್ಯದ ಜ್ವಲಂತ ಸಮಸ್ಯೆ ಮುಂದಿಟ್ಟುಕೊಂಡು ಜು.22ರಂದು ಬೆಂಗಳೂರಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರಾಜ್ಯ ಬಿಜೆಪಿ ಯೋಜನೆ ಹಮ್ಮಿಕೊಂಡಿದೆ. ಪ್ರತಿ ಜಿಲ್ಲೆಗಳಿಂದ ಪಕ್ಷದ ಕಾರ್ಯಕರ್ತರು ಆಗಮಿಸಬೇಕು ಎಂದು ಬಿಜೆಪಿ ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷ ಸೋಮಲಿಂಗಪ್ಪ ಹೇಳಿದ್ದಾರೆ.
ಇಲ್ಲಿನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಎಸ್ಸಿ ಮತ್ತು ಎಸ್ಟಿ ಮೋರ್ಚಾಗಳ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ರಾಜ್ಯ ಸರ್ಕಾರ ಎಸ್ಟಿ ಮತ್ತು ಎಸ್ಸಿ ಜನಾಂಗದ ಸೌವಲತ್ತು ಕಸಿಯುತ್ತಿದೆ. ನಮ್ಮ ಜನಾಂಗಕ್ಕೆ ಬರಬೇಕಾದ ಸೌಲಭ್ಯ ಸಿಗುತ್ತಿಲ್ಲ.
ದಲಿತರು, ಅಲ್ಪಸಂಖ್ಯಾತ ಮತ್ತು ಹಿಂದುಳಿದವರ ಹೆಸರಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಆ ಜನಾಂಗಕ್ಕೆ ಮೋಸ ಮಾಡುತ್ತಿದೆ. ಮೊಸಳೆ ಕಣ್ಣೀರಿಡುವ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ತೀಲಾಂಜಲಿ ಇಡುತ್ತಿದೆ ಎಂದರು.
ರಾಜ್ಯ ಹಿಂದುಳಿದ ಶಾಶ್ವತ ಆಯೋಗದ ಅಧ್ಯಕ್ಷ ಎನ್.ಶಂಕ್ರಪ್ಪ ಮಾತನಾಡಿ, ಬಿಜೆಪಿ ಜಾತಿ ಹೆಸರಲ್ಲಿ ರಾಜಕೀಯ ಮಾಡುವ ಪಕ್ಷವಲ್ಲ. ದೇಶದ ಹಿತ ಕಾಪಾಡುವಲ್ಲಿ ನಮ್ಮ ಕಾರ್ಯಕರ್ತರು ಸದಾ ಮುಂದಿರುತ್ತಾರೆ. ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನೂ ಉನ್ನತ ಹುದ್ದೆಗೇರಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಮುಖಂಡರಾದ ಅಶೋಕ ಗಸ್ತಿ, ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಪಕ್ಷದ ಜಿಲ್ಲಾಧ್ಯಕ್ಷ ವೀರಣ್ಣಗೌಡ ಮಲ್ಲಾಬಾದಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ, ನಾಗರತ್ನ ಕುಪ್ಪಿ, ದೇವಿಂದ್ರ ನಾದ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ದಾಸನಕೇರಾ, ಲಿಂಗಪ್ಪ ಹತ್ತಿಮನಿ, ಮಹಾದೇವಪ್ಪ ಗಣಪುರ, ಮಲ್ಲಿಕಾರ್ಜುನ ಗುಳೇದ್, ತ್ರೀಶೂಲ ಹವಾಲ್ದಾರ್, ನಾಗರಾಜ ಬೀರನೂರ, ಹಣಮಂತ ಇಟಗಿ, ಸುರೇಶ ಅಂಬಿಗೇರ, ವೆಂಕಟರಡ್ಡಿ ಅಬ್ಬೆತುಮಕೂರು ಸೇರಿದಂತೆ ಇನ್ನಿತರರು ಇದ್ದರು.