ಜಾಕ್ವೆಲ್ ಪರಿಶೀಲಿಸಿದ ವಿಪಕ್ಷ ಸದಸ್ಯರು
ಸುರಪುರ: ತಾಲೂಕಿನ ಶೆಳ್ಳಗಿ ಗ್ರಾಮದ ಬಳಿ ಹರಿಯುವ ಕೃಷ್ಣಾ ನದಿಯಲ್ಲಿ ನೀರು ಇಳಿಮುಖಗೊಂಡಿದ್ದು, ಜಾಕವೆಲ್ನ ಇನ್ಟ್ಯಾಂಕ್ಗೆ ನೀರು ಪೂರೈಕೆಯಾಗದ ಕಾರಣ ಪಟ್ಟಣಕ್ಕೆ ಕಳೆದೆರೆಡು ದಿನಗಳಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದೆ.
ಆ ಹಿನ್ನೆಲೆಯಲ್ಲಿ ಪುರಸಭೆ ವಿರೋಧ ಪಕ್ಷದ ಸದಸ್ಯರು ಗುರುವಾರ ಕೃಷ್ಣಾ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿ ನೀರಿನ ಸಮಸ್ಯೆ ಇದ್ದರೂ ಪುರಸಭೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ. ಪಟ್ಟಣದ ಜನತೆಗೆ ನೀರು ಸರಬರಾಜು ಮಾಡಬೇಕಿರುವ ಪುರಸಭೆ ನಿದ್ರೆಗೆ ಜಾರಿದಂತೆ ಕಾಣುತ್ತಿದೆ ಎಂದು ಆರೋಪಿಸಿದರು.
ಕಾಮಗಾರಿಗೆ ನಿರ್ಲಕ್ಷ್ಯ: ಕಳೆದ ಮಾರ್ಚ್ ತಿಂಗಳಲ್ಲಿ ಬರ ಪರಿಹಾರ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿತ್ತು. ಆದರೆ ಅದನ್ನು ತಂದು ಕಾಮಗಾರಿ ಆರಂಭಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.
ಮೊನ್ನೆಯಷ್ಟೇ ಪುರಸಭೆ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ವಿಷಯ ತಿಳಿಸಿದಾಗ ತಕ್ಷಣ ಅನುದಾನ ನೀಡಿದ್ದಾರೆ. ಆದರೆ ಇದುವರೆಗೂ ಕಾಮಗಾರಿ ಆರಂಭಿಸಿಲ್ಲ ಎಂದು ಕಿಡಿಕಾರಿದರು.
ತಕ್ಷಣ ನದಿಯಲ್ಲಿ ಕಾಮಗಾರಿ ಆರಂಭಿಸಿ ಪಟ್ಟಣದ ಜನತೆಗೆ ನೀರು ಸರಬರಾಜು ಮಾಡಬೇಕು. ಇಲ್ಲವಾದಲ್ಲಿ ವಾರದೊಳಗೆ ಪುರಸಭೆ ಕಾರ್ಯಲಯದ ಮುಂದೆ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ವಿರೋಧ ಪಕ್ಷದ ಸದಸ್ಯರಾದ ವೇಣುಮಾಧವ ನಾಯಕ, ಪಾರಪ್ಪ ಗುತ್ತೇದಾರ್, ರಾಜಾ ಜೈರಾಂ ನಾಯಕ, ಭೀಮಾಶಂಕರ ಬಿಲ್ಲವ್, ವೆಂಕಟೇಶ ಆಲ್ಟಿ, ಮಾನಪ್ಪ ಚೆಳ್ಳಗಿಡ, ಏಕ್ಬಾಲ್ ವರ್ತಿ, ಕಲೀಂ ಜಹಗೀರದಾರ್, ಮುಖಂಡರಾದ ವಿಷ್ಣು ಗುತ್ತೇದಾರ್, ಮಹೇಶ ಸಾಹುಕಾರ್ ವಾಲಿ, ಗೋವಿಂದರಾಜ ಶಪಾಪುರಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

