ಜೇವರ್ಗಿ: ತಾಲೂಕಿನ ನೆಲೋಗಿ ಠಾಣೆ ವ್ಯಾಪ್ತಿಯ ಕಾಸರಭೋಸಗಾ ಗ್ರಾಮದಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೇವರ್ಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಬೂಬ್ ಪಟೇಲ್ ಪೊಲೀಸ್ ಪಾಟೀಲ್ (45) ಬಂಧಿತ ಆರೋಪಿ. ತಲೆಮರೆಸಿಕೊಂಡಿದ್ದ ಈತನನ್ನು ಗುಲ್ಬರ್ಗದಲ್ಲಿ ಶುಕ್ರವಾರ ಬಂಧಿಸಲಾಗಿದೆ. ಬಂಧಿತನನ್ನು ವಿಚಾರಣೆಗೊಳಪಡಿಸಿ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಬಾಲಕಿಯ ತಂದೆ, ತಾಯಿ ಮನೆಯಲ್ಲಿಲ್ಲದ ಸಮಯದಲ್ಲಿ ಮನೆಗೆ ನುಗ್ಗಿದ ಆರೋಪಿ ಅತ್ಯಾಚಾರ ನಡೆಸಿದ್ದ. ಎಸ್ಪಿ ಡಾ. ಅಮೀತಸಿಂಗ್ ಮಾರ್ಗದರ್ಶನದಲ್ಲಿ ಸಿಪಿಐ ಬಾಸು ಚವ್ಹಾಣ, ನೆಲೋಗಿ ಠಾಣೆಯ ಪ್ರಭಾರಿ ಎಸ್ಸೈ ಪಿ.ಎನ್. ಮನಗೂಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.