ಜಿಲ್ಲಾ ಸಾಂಸ್ಕೃತಿಕ ಉತ್ಸವ ನಡೆಸಲು ಒತ್ತಾಯ
ಯಾದಗಿರಿ: ನೂತನ ಜಿಲ್ಲೆಯಾಗಿ ನಾಲ್ಕು ವರ್ಷ ಗತಿಸಿದರೂ ಜಿಲ್ಲಾ ಉತ್ಸವ ಮಾಡಿಲ್ಲ. ಇದರಿಂದ ಗ್ರಾಮೀಣ ಜನರ ಕಲೆಗಳನ್ನು ಗುರುತಿಸಿ ಕಲಾವಿದರನ್ನು ಬೆಳೆಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಯುವ ದಲಿತ ಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗ್ರಾಮೀಣ ಸಾಂಸ್ಕೃತಿಕ ಉತ್ಸವ ಸುಗ್ಗಿ-ಹುಗ್ಗಿ ಕಾರ್ಯಕ್ರಮಕ್ಕೆ ಸರ್ಕಾರ 5 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಕಳೆದ ಏಪ್ರಿಲ್‌ನಲ್ಲಿ ಅಂದಿನ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಅವರು ಅನುಮತಿ ನೀಡಿ ಮತ್ತೆ ಅವರೇ ಅದನ್ನು ರದ್ದುಗೊಳಿಸಿದ್ದರು. ಆದ್ದರಿಂದ ಜಿಲ್ಲೆಯ ಕಲಾವಿದರಿಗೆ ಬೇಸರ ಉಂಟು ಮಾಡಿದೆ. ಗ್ರಾಮೀಣ ಜನರ ಕಲೆಯನ್ನು ಗುರುತಿಸಲು ವೇದಿಕೆ ಕಲ್ಪಿಸಿಕೊಡಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಜಿಲ್ಲಾಧ್ಯಕ್ಷ ಎಂ. ಭೀಮಾಶಂಕರ ಯರಗೋಳ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿದಾನಂದಪ್ಪ ಛಲವಾದಿ, ಹಣಮಂತ ಖಾನಹಳ್ಳಿ, ಶಾಂತಪ್ಪ ಮ್ಯಾಗಿನಮನಿ, ಸಾಬಣ್ಣ ಹಲಿಗಿ, ದುರ್ಗಪ್ಪ ರಂಗನೂರ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

