ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯ
ಚಿಂಚೋಳಿ: ಡಾ. ಸರೋಜನಿ ಮಹಿಷಿ ವರದಿ ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಶುಕ್ರವಾರ ತಹಸೀಲ್ದಾರ್ ಕಚೇರಿ ಮುಂದೆ ತಾಲೂಕು ವೀರ ಕನ್ನಡಿರ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ತಾಲೂಕು ವೀರ ಕನ್ನಡಿಗರ ಸೇನೆ ಅಧ್ಯಕ್ಷ ವಿಠಲ್ ಕುಸಾಳೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಡಾ. ಸರೋಜನಿ ಮಹಿಷಿ ವರದಿ ಕಡ್ಡಾಯವಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿ ದಶಕಗಳೇ ಕಳೆದರೂ ಈವರೆಗೆ ಸರ್ಕಾರ ಅನುಷ್ಠಾನಗೊಳಿಸಿಲ್ಲ. ಒಟ್ಟು 58 ಶಿಫಾರಸುಗಳ ಪೈಕಿ ಕೇವಲ 12 ಶಿಫಾರಸ್ಸುಗಳನ್ನು ಮಾತ್ರ ಸರ್ಕಾರ ಅನುಷ್ಠಾನಗೊಳಿಸಿದೆ. ಡಾ. ಸರೋಜನಿ ಮಹಿಷಿ ವರದಿ ಅನುಷ್ಠಾನಗೊಳಿಸಿದರೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ಸ್ಥಳೀಯ ಚೆಟ್ಟಿನಾಡ್ ಮತ್ತು ವಿಕಾಟ ಸಾಗರ ಸಿಮೆಂಟ್ ಕಂಪನಿಯಲ್ಲಿ ಸ್ಥಳಿಯ ಕನ್ನಡಿಗರಿಗೆ ಉದ್ಯೋಗ ನೀಡದೆ ತುಂಬಾ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಸತೀಶ ಮುತ್ತಂಗಿ, ಕಾರ್ಯದರ್ಶಿ ವೀರಪ್ಪ ಮಂತನಗೊಟ್ಟಿ, ರಾಜು, ಎಸ್.ಕೆ. ಯಲ್ಲಾಲಿಂಗ, ಶ್ರೀಕಾಂತ ವೆಂಕಟ, ನಟರಾಜ್, ಉಮೇಶ ಅಮರ್, ಪವನ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

