ಮಹಿಳೆ ಸುರಕ್ಷೆಗೆ ಆದ್ಯತೆ

Updated on: 

ಯಾದಗಿರಿ: ಬಾಲಕಿಯರು, ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ತಡೆಗಟ್ಟುವುದು ಹಾಗೂ ಮಹಿಳೆಯರ ಸುರಕ್ಷತೆ ಪೊಲೀಸ್ ಇಲಾಖೆಯ ಆದ್ಯತೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ವಂಶಿಕೃಷ್ಣ ಹೇಳಿದರು.
 ಎಸ್ಪಿ ಕಾರ್ಯಾಲಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಕುರಿತು ಜಿಲ್ಲೆಯ ಸಮಾಜ ಕಲ್ಯಾಣಾಧಿಕಾರಿಗಳು, ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಸತಿ ನಿಲಯಗಳ ಮೇಲ್ವಿಚಾರಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಇನ್ನಿತರ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
100ಕ್ಕೆ ಕರೆ ಮಾಡಿ: ಪೊಲೀಸ್ ಸಹಾಯ ಬೇಕಿದ್ದಲ್ಲಿ ಕೂಡಲೇ ಜಿಲ್ಲಾ ನಿಸ್ತಂತು ಕೋಣೆ ಸಂಖ್ಯೆ 100ಕ್ಕೆ, ದೂ. 08473-253736, 251778 ಕರೆ ಮಾಡಿ. ಅಲ್ಲದೆ ನಿಮ್ಮ ಹತ್ತಿರದ ಪೊಲೀಸ್ ಠಾಣೆಗಳ ಸದುಪಯೋಗ ಪಡೆದುಕೊಳ್ಳಿ ಎಂದ ಅವರು, ಎಲ್ಲ ಹಳ್ಳಿಗಳಲ್ಲಿ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿ ಮೂಲಕ ಜನಸಂಪರ್ಕ ಸಭೆ, ನಾಗರಿಕ ಸಮಿತಿ ಸಭೆ, ಮೊಹಲ್ಲಾ ಮೀಟಿಂಗ್ ನಡೆಸಿ ಕಾನೂನು ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಮಹಿಳೆಯರ ಮೇಲೆ ಯಾವುದೇ ದೌರ್ಜನ್ಯಗಳು ಜರುಗದಂತೆ ಸೂಕ್ತ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ: ಸಭೆಯಲ್ಲಿ ಹಾಜರಿದ್ದ ಎಲ್ಲ ಅಧಿಕಾರಿಗಳಿಗೆ ತಮ್ಮ ಕಚೇರಿಗಳಲ್ಲಿ ಮಹಿಳಾ ಸಿಬ್ಬಂದಿಗೆ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರಿಗೆ ತಮ್ಮ ಶಾಲೆಗಳಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಲು ಸೂಚಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com