ಗುಲ್ಬರ್ಗಾ

ಕೆಂಭಾವಿ ಆಸ್ಪತ್ರೆಗೆ ಜಿಪಂ ಅಧ್ಯಕ್ಷರ ಭೇಟಿ

Published On :

ಕೆಂಭಾವಿ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಜಿಪಂ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ ಪಾಟೀಲ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಒಳಗಾದ ಅನೇಕರ ಆರೋಗ್ಯವನ್ನು ವಿಚಾರಿಸಿದರು.
ಇದೇ ಸಂದರ್ಭದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾದವರು ಆಸ್ಪತ್ರೆಯಲ್ಲಿ ಉಳಿಯಲು ಸರಿಯಾದ ಹಾಸಿಗೆ ವ್ಯವಸ್ಥೆ ಇಲ್ಲದೆ ನೆಲದ ಮೇಲೆಯೇ ಮಲಗಿದ್ದು, ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಪಂ ಅಧ್ಯಕ್ಷ ಸಿದ್ದನಗೌಡ, ಕೆಂಭಾವಿಯಲ್ಲಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಅನೇಕರು ಇಲ್ಲಿ ಶಸ್ತ್ರ ಚಿಕಿತ್ಸೆಗೆ ದಾಖಲಾಗುತ್ತಾರೆ. ತಿಂಗಳಿಗೆ ಅತಿ ಹೆಚ್ಚು ಅಂದರೆ ಸುಮಾರು 60 ರಿಂದ 80 ಮಂದಿ ಈ ಶಸ್ತ್ರ ಚಿಕಿತ್ಸೆಗೆ ಒಳಪಡುತ್ತಿದ್ದಾರೆ. ಜಿಲ್ಲಾ ಕೇಂದ್ರ ಬಿಟ್ಟರೆ ಇಲ್ಲಿಯೇ ಇಷ್ಟು ಮಂದಿ ಶಸ್ತ್ರ ಚಿಕಿತ್ಸೆಗೆ ಒಳಪಡುತ್ತಿದ್ದಾರೆ.
ಇದನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲು ನಾನು ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಆರೋಗ್ಯ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಆಯುಕ್ತರ ಕಚೇರಿಯಲ್ಲಿ 2 ಕೋಟಿ 38 ಲಕ್ಷ ಪ್ರಸ್ತಾವನೆ ಇದೆ. ಇದನ್ನು ಬೇಗ ಬಿಡುಗಡೆಗೊಳಿಸಿ ಸುಸಜ್ಜಿತ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಬೇಕೆಂದು ಕೋರಿದ್ದೇವೆ ಎಂದು ಹೇಳಿದರು.
ನಂತರ ಆಸ್ಪತ್ರೆಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ವೈದ್ಯಾಧಿಕಾರಿ ಡಾ. ಶಂಕರಗೌಡ ಮೂಲಿಮನಿ, ಡಾ. ವಿಶ್ವನಾಥ, ಡಾ. ರಕ್ಷಿತಾ ನ್ಯಾಮಗೊಂಡ, ಡಾ. ಅಶ್ವಿನಿ, ಎಪಿಎಂಸಿ ಸದಸ್ಯ ವಾಮನರಾವ ದೇಶಪಾಂಡೆ, ಮಲ್ಲಯ್ಯ ಹಿರೇಮಠ ಇದ್ದರು.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.