ಟಿಇಟಿ ಅಂಕಗಳ ಸಡಿಲಿಕೆಗೊಳಿಸಿ

Updated on: 

ಯಾದಗಿರಿ: ಟಿಇಟಿ ಪರೀಕ್ಷೆಯಲ್ಲಿ ಶಿಕ್ಷಣ ಇಲಾಖೆ ರೂಪಿಸಿರುವ ಶೇಕಡಾವಾರು ಅಂಕಗಳನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಇತ್ತೀಚೆಗೆ ಕೋಲಿ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗಾಗಿ ಶಿಕ್ಷಣ ಇಲಾಖೆ ನಡೆಸುತ್ತಿರುವ ಟಿಇಟಿ ಪರಿಕ್ಷೆಯಲ್ಲಿ ಎಸ್ಸಿ, ಎಸ್ಟಿ ವರ್ಗದವರಿಗೆ ಶೇ.80 ಮತ್ತು ಸಾಮಾನ್ಯ ವರ್ಗಕ್ಕೆ ಶೇ.90 ಅಂಕಗಳನ್ನು ಕಡ್ಡಾಯಗೊಳಿಸಿದೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳು ವಂಚಿತರಾಗುವ ಸಂಭವವಿದ್ದು, ಈ ಅವೈಜ್ಞಾನಿಕ ಕ್ರಮವನ್ನು ತಕ್ಷಣವೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
ನೆರೆಯ ಆಂಧ್ರದಲ್ಲಿನ ಸರ್ಕಾರ ಇದೇ ಟಿಇಟಿ ಪರೀಕ್ಷೆಗೆ ಹಾಜರಾಗುವ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಶೇ.50 ಅಂಕ ಮತ್ತು ಸಾಮಾನ್ಯ ವರ್ಗಕ್ಕೆ ಶೇ.60 ಅಂಕ ನಿಗದಿಪಡಿಸಲಾಗಿದೆ. ಇದರಿಂದ ಅಭ್ಯರ್ಥಿಗಳಿಗೆ ಯಾವುದೇ ಸಮಸ್ಯೆಯಾಗುತ್ತಿಲ್ಲ.
ಹೀಗಾಗಿ ರಾಜ್ಯ ಸರ್ಕಾರವೂ ಕೂಡಾ ಆಂಧ್ರದ ಮಾದರಿಯ ಕ್ರಮವನ್ನು ಅನುಸರಿಸಬೇಕು. ಇದರಿಂದ ವಯೋವುತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ, ಮಲ್ಲಿಕಾರ್ಜುನ ಟಿ. ವಡಗೇರಿ, ತಾಯಪ್ಪ ಮಸ್ಕನಳ್ಳಿ, ಭೀಮರಾಯ ಬಸವಂತಪುರ, ಗುರು ಸೇರಿದಂತೆ ಟಿಇಟಿ ಅಭ್ಯರ್ಥಿಗಳು ಇದ್ದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com