ಗುಲ್ಬರ್ಗಾ

ಅತ್ಯಾಚಾರ ತಡೆಗೆ ಸರ್ಕಾರ ವಿಫಲ

Published On :

ಕೆಂಭಾವಿ: ರಾಜ್ಯದಲ್ಲಿ ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಅತ್ಯಾಚಾರ ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಗುಲ್ಬರ್ಗ ಜಿಪಂ ಮಾಜಿ ಉಪಾಧ್ಯಕ್ಷ ಶಂಕ್ರಣ್ಣ ವಣಕ್ಯಾಳ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ನಡೆದ ಬಿಜೆಪಿ ಶಹಾಪುರ ಮಂಡಲ ಕಾರ್ಯಕಾರಿಣಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಬರಗಾಲ ಆವರಿಸಿ ರೈತರು ಕಂಗೆಟ್ಟಿದ್ದಾರೆ.
ರೈತರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟಾರೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದರ ನೈತಿಕ ಹೊಣೆಹೊತ್ತು ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನಂತರ ನಡೆದ ಸಭೆಯಲ್ಲಿ ಪ್ರತಿ ಗ್ರಾಮಗಳಲ್ಲಿ ಕಾರ್ಯಕರ್ತರ ನಿರ್ಮಾಣ, ವಿದ್ಯುತ್ ಸಮಸ್ಯೆ ಪರಿಹರಿಸಲು ಮುಂದಿನ ತಿಂಗಳು 4ನೇ ತಾರೀಖಿನಂದು ಶಹಾಪುರ ವಿದ್ಯುತ್ ಕಚೇರಿಗೆ ಮುತ್ತಿಗೆ, ಕಾಲುವೆ ನವೀಕರಣದಲ್ಲಿ ಆದ ಕಳಪೆ ಕಾಮಗಾರಿಯ ತನಿಖೆಗೆ ಆಗ್ರಹ, ಪಟ್ಟಣದಲ್ಲಿ ಮುಂಬರುವ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವುದು ಸೇರಿದಂತೆ ಹಲವಾರು ವಿಷಯಗಳಿಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರಣ್ಣಗೌಡ ಮಲ್ಲಾಬಾದಿ, ಚನ್ನಬಸು ವನದುರ್ಗ, ಮಲ್ಲಿಕಾರ್ಜುನ ಚಿಲ್ಲಾಳ, ಯಲ್ಲಯ್ಯ ನಾಯಕ ವನದುರ್ಗ, ಬಸಯ್ಯಸ್ವಾಮಿ ಯಕ್ತಾಪುರ, ರಾಮನಗೌಡ ಚಿತ್ತರಗಿ, ಮುದಕಣ್ಣಗೌಡ ಚಿಂಚೋಳಿ, ಅನಿಲರಾಜ ತುಂಬಿಗಿ, ತ್ರಿಶೂಲ ಹವಾಲ್ದಾರ, ಶಾಂತಯ್ಯ ಹೋತಪೇಟ್, ಸಿದ್ದಲಿಂಗರೆಡ್ಡಿ, ಮಲಕಪ್ಪ ಶಹಾಪುರ, ಅಮರಪ್ಪ, ಬಸವರಾಜ ಅರುಣಿ, ಭಗವಂತರೆಡ್ಡಿ, ಶರಣಗೌಡ, ವಿನಾಯಕ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.