ಬೊಮ್ಮನಳ್ಳಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಆಳಂದ: ತಾಲೂಕಿನ ಬೊಮ್ಮನಳ್ಳಿಯಲ್ಲಿ ಕಳೆದ ಜನವರಿಯಲ್ಲಿ ಬಾಲಕಿಯ ಮೇಲೆ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಕೈಗೊಂಡಿದ್ದರೂ ಈ ವರೆಗೂ ಆರೋಪಿಗಳ ಮೇಲೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಕ್ಷದ ತಾಲೂಕು ಘಟಕದ ಅಧ್ಯಕ್ಷ ರಮೇಶ ಲೋಹಾರ ನೇತೃತ್ವದಲ್ಲಿ ಭಾನುವಾರ ತಹಸೀಲ್ದಾರ್ ಬಸವರಾಜ ಅಂಬರಶೆಟ್ಟ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಅತ್ಯಚಾರಕ್ಕೊಳಪಟ್ಟ ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಬಾಲಕಿ ಸಂಪೂರ್ಣ ಪ್ರಜ್ಞಾಹೀನಳಾಗಿದ್ದಳು, ಹೇಳಿಕೆ ನೀಡುವ ಸ್ಥಿತಿಯಲ್ಲಿರಲಿಲ್ಲ. ಆದರೆ ಬಾಲಕಿ ಪೋಷಕರು ಹಲ್ಲೆ ಮಾಡಿ ಅತ್ಯಾಚಾರವೆಸಗಿದ್ದಾರೆಂದು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಬಾಲಕಿಗೆ ಯಾವುದೇ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸದೆ ಹಲ್ಲೆ ಪ್ರಕರಣವನ್ನು ಮಾತ್ರ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾಲಕಿಯ ಪೋಷಕರು ಈ ಬಗ್ಗೆ ಮಾಧ್ಯಮದ ಎದುರು ಪೊಲೀಸರ ವೈಫಲ್ಯ ಕುರಿತು ಮಾತನಾಡಿದ್ದಾರೆ. ನಿಂಬರ್ಗಾ ಠಾಣೆಯಲ್ಲಿ ಪ್ರಕರಣ ನೀಡದಂತೆ ಪೋಷಕರ ಮೇಲೆ ಒತ್ತಡ ಹೇರಲಾಗಿದೆ. ಬಾಲಕಿಯ ದೇಹ ಪರಿಸ್ಥಿತಿ ಹದಗೆಡುವ ಸ್ಥಿತಿಯಲ್ಲಿದ್ದಾಗ ದೂರದ ಮಾಹಾರಾಷ್ಟ್ರ ಸೋಲಾಪುರ ಆಸ್ಪತ್ರೆಗೆ ಸಾಗಿಸಲಾಯಿತ್ತು ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ನ್ಯಾಯಾಂಗ ತನಿಖೆಗೊಳಪಡಿಸಬೇಕು. ನೈಜತೆ ಬಗ್ಗೆ ವಿಧಿವಿಜ್ಞಾನ ಪರೀಕ್ಷೆಗೊಳಪಡಿಸಬೇಕು. ಬಾಲಕಿಗೆ ಉತ್ತಮ ಚಿಕಿತ್ಸೆಯನ್ನು ಸರ್ಕಾರವೇ ಭರಿಸಬೇಕು. ಪೋಷಕರಿಗೆ ಸೂಕ್ತ ರಕ್ಷಣೆ ನೀಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಜಿಪಂ ಸದಸ್ಯೆ ಪೂಜಾ ಲೋಹಾರ, ಪಕ್ಷದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಬಿರಾದಾರ, ಮಲ್ಲಿನಾಥ ಕಂದಗುಳೆ, ಕಡಗಂಚಿ ಶಕ್ತಿ ಕೇಂದ್ರದ ಅಧ್ಯಕ್ಷ ಶರಣಗೌಡ ಪಾಟೀಲ, ಖಜೂರಿ ಅಧ್ಯಕ್ಷ ಸಿದ್ಧರಾಮ ಧಮ್ಮೂರೆ, ಶಿವಶರಣಪ್ಪಾ ಕಮಲಾಪೂರೆ, ಮೋತಿರಾಮ ಪವಾರ, ಬಸವರಾಜ ಬಿರಾದಾರ ನೆಲ್ಲೂರ, ಮಹಿಳಾ ಉಪಾಧ್ಯಕ್ಷ ಉಮಾಬಾಯಿ ಕೋಟೆ, ರಕ್ಷಿತಾ ಕೋಟೆ, ಸುನಿತಾ ಕಸ್ತೂರೆ, ವಿಜಯಲಕ್ಷ್ಮೀ ಎನ್. ಹಿರೋಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

