ಗುಲ್ಬರ್ಗಾ

ರೈತರಿಗೆ ಭೂ-ಚೇತನ ಯೋಜನೆ ತರಬೇತಿ

Published On :

ಯಾದಗಿರಿ: ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ಕೃಷಿ ಇಲಾಖೆ ಹಾಗೂ ವೃತ್ತಿ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ರೈತರಿಗೆ ಭೂ-ಚೇತನ ಯೋಜನೆ ಅಡಿಯಲ್ಲಿ ತರಬೇತಿ ನಡೆಯಿತು. ಕೃಷಿ ಅಧಿಕಾರಿ ಸುರೇಶ ಬಿ. ಮಾತನಾಡಿ, ಜೈವಿಕ ಗೊಬ್ಬರಗಳಾದ ರೈಜೋಬಿಯೋ, ರಂಜಕ ಕರಗಿಸುವ ಗೊಬ್ಬರ ಹಾಗೂ ಅಜಟೋಬ್ಯಾಕ್ಟರ್ಗಳಿಂದ ಬಿತ್ತುವ ಪೂರ್ವದಲ್ಲಿ ಬೀಜೋಪಚಾರ ಮಾಡಿ ಬಿತ್ತುವ ವಿಧಾನದ ಬಗ್ಗೆ ಹಾಗೂ ತಿಪ್ಪೆ ಗೊಬ್ಬರದೊಂದಿಗೆ ಮಿಶ್ರಣ ಮಾಡಿ ಬೆಳೆ ಒದಗಿಸಿದಲ್ಲಿ ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡಬಹುದೆಂದು ಹೇಳಿದರು. ವೃತ್ತಿ ಸಂಸ್ಥೆಯ ಮುಖ್ಯಸ್ಥ ಮಹಾಂತ ಸ್ವಾಮಿ ಮಾತನಾಡಿ, ರೈತರು ಗ್ರಾಮ ಮಟ್ಟದಲ್ಲಿ ರೈತ ಸಂಘಗಳನ್ನು ರಚನೆ ಮಾಡಿಕೊಂಡು ಒಕ್ಕಲುತನದಲ್ಲಿ ಬರುವ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದೆಂದು ಹೇಳುತ್ತಾ ಸಂಘ ರಚನೆ ಬಗ್ಗೆ ತರಬೇತಿ ನೀಡಿದರು. ಕೃಷಿ ಇಲಾಖೆ ಅಧಿಕಾರಿಗಳಾದ ಮಲ್ಲಿನಾಥ ಪಟ್ಟದಾರ, ಅಲ್ಲಿಪುರ ಗ್ರಾಮದ ನೂರಾರು ರೈತರು ತರಬೇತಿಯಲ್ಲಿ ಭಾಗವಹಿಸಿದ್ದರು. ಆತ್ಮ ಸಂಯೋಜಕ ಶೈಲೇಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.