ಗುಲ್ಬರ್ಗಾ

ಆನೆಕಾಲು ರೋಗ: ಸಹಕಾರ ಅಗತ್ಯ

Published On :

ಕನ್ನಡಪ್ರಭ ವಾರ್ತೆ  ಸುರಪುರ  ಜೂ.2
ಆನೆಕಾಲು ರೋಗ ಸಂಪೂರ್ಣ ನಿರ್ಮೂಲನೆಯಾಗಬೇಕಾದರೆ ನಾಗರಿಕರ ಸಹಕಾರ ಅಗತ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಆರ್. ವಿ. ನಾಯಕ ತಿಳಿಸಿದರು.
ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಅಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಸೋಮವಾರ ಏರ್ಪಡಿಸಲಾಗಿದ್ದ ಆನೆಕಾಲು ರೋಗದ ಔಷಧ ನೀಡುವ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಜೂ. 5ರಂದು ಫೈಲೇರಿಯಾ ದಿನಾಚರಣೆ: ರಾಜ್ಯಾದ್ಯಂತ ಫೈಲೇರಿಯಾ ದಿನಾಚರಣೆ ಆಚರಿಸಲಾಗುತ್ತಿದೆ. ಆನೆಕಾಲು ರೋಗ ನಿರ್ಮೂಲನೆಗಾಗಿ ತಾಲೂಕಿನಾದ್ಯಂತ ಸಾಮೂಹಿಕ ಔಷಧಿ ನೀಡುವ 10ನೇ ಸುತ್ತಿನ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
ಕಾಟಾಚಾರವಾಗಬಾರದು: ಆನೆ ಕಾಲು ರೋಗದ ಮಾತ್ರೆ ವಿತರಣೆ ಕೇವಲ ಕಾಟಾಚಾರಕ್ಕಾಗದೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ರೋಗದ ಬಗ್ಗೆ ತಿಳಿ ಹೇಳುವ ಕೆಲಸ ಮಾಡಬೇಕು. ಊಟದ ನಂತರ ಮಾತ್ರೆಗಳನ್ನು ನುಂಗಿಸಲು ಸೂಚಿಸಬೇಕು ಹಾಗೂ ಮಾತ್ರೆ ಸೇವಿಸುವುದರಿಂದ ಯಾವುದೇ ಅಡ್ಡಪರಿಣಾಮ ಆಗುವುದಿಲ್ಲ.
ಇವರು ಸೇವಿಸಬಾರದು: 2 ವರ್ಷದ ಮಕ್ಕಳು, ಗರ್ಭಿಣಿಯರು, ವಯೋವೃದ್ಧರು, ಹೃದಯ ಖಾಯಿಲೆ ಮತ್ತು ಇನ್ನಿತರ ರೋಗದಿಂದ ಬಳಲುತ್ತಿರುವವರು ಡಿಇಸಿ ಮಾತ್ರೆ ಸೇವಿಸಬಾರದು ಎಂದು ತಿಳಿಸಬೇಕು ಎಂದು ಸಲಹೆ ನೀಡಿದರು.
ತಾಲೂಕಿನಲ್ಲಿ 4.20 ಲಕ್ಷಕ್ಕೂ ಹೆಚ್ಚು ಜನರಿಗೆ ಡಿಇಸಿ ಮಾತ್ರ ನೀಡುವ ಗುರಿ ಹೊಂದಲಾಗಿದೆ. ಕಳೆದ ಬಾರಿ ಶೇ. 87ರಷ್ಟು ಮಾತ್ರ ಸಾಧನೆಯಾಗಿದೆ. ಈ ವರ್ಷ ಶೇ. 100ರಷ್ಟು ಗುರಿ ಹೊಂದಲಾಗಿದ್ದು ನಾಗರಿಕರು ತಪ್ಪದೆ ಮಾತ್ರೆಗಳನ್ನು ಸೇವಿಸುವುದರ ಜತೆಯಲ್ಲಿ ರೋಗ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಹಸನಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಫಿ ಉಜ್ಜಮಾ ಆನೆಕಾಲು ರೋಗ, ಲಕ್ಷಣ, ಚಿಕಿತ್ಸಾ ಕೇಂದ್ರಗಳು, ಮಾತ್ರೆ ಸೇವನೆ ಕುರಿತು ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ, ಅಮರಪ್ಪ ಮಾತನಾಡಿದರು.
ಉಪಾಧ್ಯಕ್ಷೆ ಗುರುಬಾಯಿ ವಾಲಿ, ದಂತ ವೈದ್ಯಾಧಿಕಾರಿ ಡಾ.ಹರ್ಷವರ್ಧನ ರಫಗಾರ್, ಅಂಗನವಾಡಿ ಮೇಲ್ವಿಚಾರಕಿ ಶಶಿಕಲಾ ಮತ್ತಿತರರು ವೇದಿಕೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.