ಗುಲ್ಬರ್ಗಾ

ವಿಕಾಸ ಅಕಾಡೆಮಿಯಲ್ಲಿ ಸಾಹಿತ್ಯ ಮಳಿಗೆ ಉದ್ಘಾಟನೆ

Published On :

ಗುಲ್ಬರ್ಗ: ನಗರದ ಐವಾನ್‌ಶಾಹಿ ಪ್ರದೇಶದಲ್ಲಿರುವ ವಿಕಾಸ ಅಕಾಡೆಮಿ ಕಚೇರಿಯಲ್ಲಿ ಸಾಹಿತ್ಯ ಭಂಡಾರ ಮತ್ತು ಮಾರಾಟ ಮಳಿಗೆಯ ಆರಂಭೋತ್ಸವ ನೆರವೇರಿತು. ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ಅಕಾಡೆಮಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರು ಮಳಿಗೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ, ಹೈ-ಕ ವಿಕಾಸ ಮಾಹಿತಿ ಕೇಂದ್ರಕ್ಕೆ ಯು.ಭೀಮರಾವ ಚಾಲನೆ ನೀಡಿದರು. ರಾಜ್ಯಸಭಾ ಸದಸ್ಯರೂ ಆಗಿರುವ ವಿಕಾಸ ಅಕಾಡೆಮಿ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಮಾರ್ತಾಂಡ ಶಾಸ್ತ್ರಿ, ಸಿ.ಎನ್. ಮಠ, ಹಣಮಂತ ಗುಡ್ಡಾ, ಸುಧೀಂದ್ರ ದೇಶಪಾಂಡೆ ಉಪಸ್ಥಿತರಿದ್ದರು.
ಕಲಬುರ್ಗಿ ಕಂಪು ನೆನಪಿನ ಸಂಪುಟಗಳು, ರಾಷ್ಟ್ರೀಯ ವಿಚಾರಧಾರೆಯುಳ್ಳ ಗ್ರಂಥಗಳು ಸೇರಿದಂತೆ ಅನೇಕ ಮೌಲ್ಯಯುತ ಪುಸ್ತಕಗಳು ಮಾರಾಟ ಮಳಿಗೆಯಲ್ಲಿವೆ. ಹೈ-ಕ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಕಾಸ ಮಾಹಿತಿಯ ಹಿನ್ನೆಲೆಯಲ್ಲಿ ಕೇಂದ್ರವನ್ನು ಆರಂಭಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.