ಮರಳು ದಂಧೆ ತಡೆಗೆ ಆಗ್ರಹಿಸಿ ಕರವೇ ಮನವಿ
ಯಾದಗಿರಿ: ಶಹಾಪುರ ತಾಲೂಕಿನ ಕೃಷ್ಣಾ ನದಿ ತಟದಿಂದ ನಿರಂತರವಾಗಿ ನಡೆಯುತ್ತಿರುವ ಮರಳು ದಂಧೆ ತಡೆಯುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನದಿ ದಡದಲ್ಲಿ ಕೊಳ್ಳೂರು ಎಂ. ಯಕ್ಷಿಂತಿ, ಗೌಡೂರು ಮತ್ತು ಹೈಯಾಳ ಗ್ರಾಮಗಳಲ್ಲಿ ಮರಳು ಲೂಟಿ ದಂಧೆ ನಿರಂತರವಾಗಿ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಜಿಲ್ಲೆಯಲ್ಲಿ ಮರಳು ದಂಧೆಗೆ ಖುದ್ದು ಅಧಿಕಾರಿಗಳೇ ಕಳ್ಳರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೂಡಲೇ ಮರಳು ದಂಧೆ ತಡೆಯದೆ ಹೋದರೆ ಕರವೇ, ಗ್ರಾಮಸ್ಥರು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಹತ್ತಿಗೂಡುರ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

