ಶರಣಬಸವ ಕೆಂಗುರಿ ಪುತ್ಥಳಿ ಅನಾವರಣ
ಸುರಪುರ: 'ದೇಶ ಸೇವೆಯೇ ಈಶ ಸೇವೆ' ಎನ್ನುವಂತೆ ಯುವಕರು ದೇಶದ ರಕ್ಷಣೆಗಾಗಿ ಸೇನೆಗೆ ಸೇರ್ಪಡೆಗೊಳ್ಳುವತ್ತ ಹೆಚ್ಚಿನ ಆಸಕ್ತಿ ವಹಿಸಬೇಕು. ಎಲ್ಲ ಸೇವೆಗಿಂತ ದೇಶ ಸೇವೆ ಅಮೂಲ್ಯ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಕರೆ ನೀಡಿದರು. ಇಲ್ಲಿಯ ಸರ್ಕಾರಿ ನೌಕರರ ಭವನದ ಹತ್ತಿರದಲ್ಲಿ ಕವಡಿಮಟ್ಟಿ ಗ್ರಾಮದ ಹುತಾತ್ಮ ಯೋಧ ಶರಣಬಸವ ಕೆಂಗುರಿ ಅವರ ಕಂಚಿನ ಪುತ್ಥಳಿಯನ್ನು ಮಂಗಳವಾರ ಅನಾವರಣಗೊಳಿಸಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ತಿಂಥಣಿ ಬ್ರಿಡ್ಜ್ನ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮಿ ಮಾತನಾಡಿದರು. ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ, ರಾಜಶೇಖರಗೌಡ ವಜ್ಜಲ್, ಯೋಧ ನಿಂಗಣ್ಣ ಚಂದಲಾಪುರ, ಮಾಜಿ ಯೋಧ ಈರಣ್ಣ ಅಸ್ಕಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

