ನಮೋಶಿ ಪರ ಪಾಟೀಲ್ ಪ್ರಚಾರ
ಅಫಜಲ್ಪುರ: ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಗೆಲವು ಖಚಿತ ಎಂದು ಮಾಜಿ ಶಾಸಕ ಎಂ.ವೈ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಬಂಕಲಾಗಾ ಮಾಶಾಳ ಕರಜಗಿ ಮಣ್ಣೂರ ಹೊಸೂರ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಭೇಟಿ ನೀಡಿ ಮಾತನಾಡಿ, ಶಿಕ್ಷಕರ ಕ್ಷೇತ್ರದಿಂದ ನಿರಂತರ 3 ಬಾರಿ ಗೆಲವು ಸಾಧಿಸಿರುವ ನಮೋಶಿಯವರು ಶಿಕ್ಷಕರ ಸಮಸ್ಯೆಗಳಿಗೆ ಸದನದ ಹೊರಗೆ ಹಾಗೂ ಒಳಗಡೆ ಸ್ಪಂದಿಸಿದ್ದಾರೆ ಎಂದರು. ಪ್ರಚಾರದಲ್ಲಿ ಬಿಜೆಪಿ ತಾ. ಅಧ್ಯಕ್ಷ ರಮೇಶ ನೀಲಗಾರ, ಜಿಪಂ ಸದಸ್ಯ ಪ್ರಕಾಶ ಜಮಾದಾರ, ಅಶೋಕ ಬಗಲಿ, ಕಾರ್ಯದರ್ಶಿ ಮಲ್ಲಿಕಾರ್ಜುನ ನಿಂಗದಳ್ಳಿ, ತಾ. ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೈಲೇಶ ಗುಣಾರಿ, ಬಿಜೆಪಿ ತಾಲೂಕು ಉಪಾಧ್ಯಕ್ಷ ಭೀಮಾಶಂಕರ ಪೂಜಾರಿ, ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಹೂಗಾರ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

