ಗುಲ್ಬರ್ಗಾ

ಟಿಇಟಿ ಪರೀಕ್ಷೆ ಇಂದು, ನಿಷೇಧಾಜ್ಞೆ ಜಾರಿ

Published On :

ಗುಲ್ಬರ್ಗ: ನಗರದ 57 ಕೇಂದ್ರಗಳಲ್ಲಿ ಜೂ.22ರಂದು ಬೆ.9ರಿಂದ ಮ.12 ಗಂಟೆ ಹಾಗೂ ಮ.2ರಿಂದ 4.30ರ ವರೆಗೆ ಟಿಇಟಿ ಪರೀಕ್ಷೆಗಳು ಜರುಗಲಿವೆ. ಈ ಪ್ರಯುಕ್ತ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪರೀಕ್ಷಾ ಕೇಂದ್ರಗಳಲ್ಲಿ ಸಂಬಂದಪಟ್ಟ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ಯಾವುದೇ ವ್ಯಕ್ತಿಗಳು ಪ್ರವೇಶಿಸದಂತೆ ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ ಅವರು ಕರ್ನಾಟಕ ಪೊಲೀಸ್ ಅಧಿನಿಯಮ 1963ರಡಿ ಕಲಂ 35(ಸಿ)ರನ್ವಯ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಪ್ರದೇಶ ವ್ಯಾಪ್ತಿಯ ಜೆರಾಕ್ಸ್ ಹಾಗೂ ಪುಸ್ತಕಗಳ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಸಮಯದಲ್ಲಿ ಲೌಡ್ ಸ್ಪೀಕರ್ ಹಾಗೂ ಮೊಬೈಲ್ ಫೋನ್ ಸಹ ಬಳಸದಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುವುದೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.