ಪಿಯು ಪಠ್ಯಪುಸ್ತಕ ಕೊರತೆ: ಎಐಡಿಎಸ್ಒ ಪ್ರತಿಭಟನೆ
ಯಾದಗಿರಿ: ಪಿಯು ಕಾಲೇಜು ಪ್ರಾರಂಭವಾಗಿ ಒಂದು ತಿಂಗಳು ಕಳೆಯುತ್ತಿದ್ದರೂ, ಮಾರುಕಟ್ಟೆಯಲ್ಲಿ ಪುಸ್ತಕಗಳು ಪೂರ್ಣ ಪ್ರಮಾಣದಲ್ಲಿ ದೊರೆಯುವಂತೆ ವ್ಯವಸ್ಥೆ ಮಾಡದ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಎಐಡಿಎಸ್ಒ ಸಂಘಟನೆ ಡಿಡಿಪಿಐ ಕಚೇರಿಯ ಮುಂದೆ ಶನಿವಾರ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ವಿವಿಧ ಪಿಯು ಕಾಲೇಜುಗಳಿಂದ ಬಂದಿದ್ದ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೂಡಲೇ ಪುಸ್ತಕಗಳ ಒದಗಿಸಲು ಆಗ್ರಹಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಐಡಿಎಸ್ಒ ಅಧ್ಯಕ್ಷ ಗೌರಮ್ಮ ಸಿ.ಕೆ., ಉಪಾಧ್ಯಕ್ಷ ರಾಮು ಬಿ. ಕಾರ್ಯದರ್ಶಿ ವಿಜಯಕುಮಾರ್ ಕೆ. ಮಾತನಾಡಿ, ಮಾರುಕಟ್ಟೆಯಲ್ಲಿ ಪುಸ್ತಕಗಳು ಲಭಿಸದೇ ಇರುವುದರಿಂದ ಪಾಠ-ಪ್ರವಚನಗಳಿಗೆ ತೊಂದರೆಯುಂಟಾಗಿ, ವಿದ್ಯಾರ್ಥಿ-ಶಿಕ್ಷಕರು ಪರದಾಡುವಂತಾಗಿದೆ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಸದಿದ್ದಲ್ಲಿ ಉಗ್ರ ಹೋರಾಟಕ್ಕೆ ಸಜ್ಜಾಗಲು ವಿದ್ಯಾರ್ಥಿಗಳಿಗೆ ಕರೆ ನೀಡಿದ ಅವರು, ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಪೇಮಿಗಳು ಇದರಲ್ಲಿ ಭಾಗವಹಿಸಲು ಮನವಿ ಮಾಡಿದರು.
ಡಿಡಿಪಿಐ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ವಿವಿಧ ಕಾಲೇಜುಗಳ ಎಐಡಿಎಸ್ಒ ಕಾಲೇಜು ಸಮಿತಿಗಳ ದೇವಪ್ಪ, ಮಲ್ಲಿಕಾರ್ಜುನ, ಪ್ರಿಯಾಂಕಾ, ಮಮತ, ಕವಿತಾ, ದೇವಿಕಾ, ಕಾವೇರಿ, ಪ್ರೀತಿ, ಸೇರಿದಂತೆ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

