ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಇಂದು
ಗುಲ್ಬರ್ಗ: ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯು ವಿಕಲಚೇತನರಿಗೆ ಜೂ.22ರಂದು ಬೆ.10.30ಕ್ಕೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭವನ್ನು ಹಮ್ಮಿಕೊಂಡಿದೆ. ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ, ಜಿಪಂ ಅಧ್ಯಕ್ಷೆ ಕಸ್ತೂರಿಬಾಯಿ ಗೌಡ್ತಿ, ಪಾಲಿಕೆ ಮಹಾಪೌರರಾದ ಅಲಿಯಾ ಸಿರೀನ್ ಆಗಮಿಸುವರು. ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟಿ.ಎಚ್.ಎಂ. ಕುಮಾರ್ ಗೌರವ ಉಪಸ್ಥಿತಿಯಲ್ಲಿರುವರು. ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು ಎಂದು ಸಂಸ್ಥೆಯ ಸಭಾಪತಿ ಅಪ್ಪಾರಾವ್ ಅಕ್ಕೋಣಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

